ಮೈಸೂರಿನಲ್ಲಿ ಕೊರೊನಾ ರೂಪಾಂತರ ಡೆಲ್ಟಾಪ್ಲಸ್ ವೈರಸ್ ಪ್ರಕರಣ ಪತ್ತೆ
1 min readಮೈಸೂರು: ಮೈಸೂರಿನಲ್ಲಿ ಕೊರೊನಾ ರೂಪಾಂತರಗೊಂಡ ಒಂದು ಡೆಲ್ಟಾಪ್ಲಸ್ ವೈರಸ್ ಪ್ರಕರಣ ಪತ್ತೆಯಾಗಿತ್ತು. ಸದ್ಯ ಅವರು ಗುಣಮುಖರಾಗಿದ್ದಾರೆ ಅಂತ ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಮಾಹಿತಿ ನೀಡಿದ್ದಾರೆ.
ಸೋಂಕಿತರ ಗೌಪ್ಯತೆ ಕಾಪಾಡುವ ನಿಟ್ಟಿನಲ್ಲಿ ಅಧಿಕೃತವಾಗಿ ಹೇಳುವಂತಿಲ್ಲ. ಸೋಂಕಿತರಾಗಿ ಗುಣಮುಖರಾದವರ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ. ಡೆಲ್ಟಾಪ್ಲಸ್ ವೈರಸ್ ಖಾತ್ರಿಯಾಗಿರುವ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ಬಂದ ನಂತರ ಆ ಬಗ್ಗೆ ತಿಳಿಸುತ್ತೇನೆ ಅಂತ ಜಿಲ್ಲಾಧಿಕಾರಿ ಬಗಾದಿ ಗೌತಮ್ ಮಾಹಿತಿ.