ಸಾರ್ವಜನಿಕರು ಇನ್ಮುಂದೆ ಸರ್ಕಾರಿ ಕಚೇರಿಯಲ್ಲಿ ವಿಡಿಯೋ ಫೋಟೋ ತೆಗೆಯುವಂತಿಲ್ಲ!

1 min read

ಪುಸ್ತಾವನೆ : ಮೇಲೆ ಓದಲಾದ ಪತ್ರದಲ್ಲಿ ರಾಜ್ಯಾಧ್ಯಕ್ಷರು , ಕರ್ನಾಟಕ ರಾಜ್ಯ ನೌಕರರ ಸಂಘ , ಕಬ್ಬನ್ ಉದ್ಯಾನವನ , ಬೆಂಗಳೂರು.

ರಾಜ್ಯಾದ್ಯಂತ ಎಲ್ಲಾ ಜಿಲ್ಲೆ , ತಾಲೂಕು ಹಾಗೂ ರಾಜ್ಯ ಮಟ್ಟದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು , ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅವರ ಕೆಲಸ ಕಾರ್ಯಗಳ ನಿಮಿತ್ತ ಆಗಮಿಸುವುದು ಸರ್ವೇಸಾಮಾನ್ಯವಾಗಿದ್ದು , ಕೆಲವು ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಗಳಿಗೆ ಕಚೇರಿ ವೇಳೆಯಲ್ಲಿ ಬಂದು ಕಚೇರಿಯ ಫೋಟೋ / ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಹಾಗೂ ಇಂತಹ ಫೋಟೋ / ವಿಡಿಯೋಗಳನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಇಲಾಖೆ , ಸರ್ಕಾರದ ಘನತೆಗೆ ಕುಂದುಂಟಾಗುತ್ತಿರುವುದು ಹಾಗೂ ಅದರಲ್ಲೂ ವಿಶೇಷವಾಗಿ ಮಹಿಳ ನೌಕರರಿಗೆ ಸಮಸ್ಯೆ ಉಂಟಾಗುತ್ತಿರುವುದರಿಂದ.

ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ / ವಿಡಿಯೋ ಮಾಡದಂತೆ ನಿಷೇಧಿಸುವ / ನಿರ್ಬಂಧಿಸುವ ಕುರಿತು ಮನವಿ ಮಾಡಿರುತ್ತಾರೆ . ಈ ಕುರಿತು ಸರ್ಕಾರವು ಕೂಲಂಕುಷವಾಗಿ ಗಮನಹರಿಸಿದ್ದು , ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಸಾರ್ವಜನಿಕರು ಅನಧಿಕೃತವಾಗಿ ಫೋಟೋ / ವಿಡಿಯೋ ಮಾಡದಂತೆ ನಿರ್ಬಂಧಿಸುವುದು ಅವಶ್ಯಕವಾಗಿರುತ್ತದೆಂದು ಅಭಿಪ್ರಾಯಪಟ್ಟಿರುತ್ತದೆ.

ದಿನಾಂಕ : 15-07-2022 ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಅನುಮತಿಯಿಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ / ವಿಡಿಯೋ ಮಾಡದಂತೆ ನಿಷೇಧಿಸಿ ಆದೇಶಿಸಲಾಗಿದೆ.

About Author

Leave a Reply

Your email address will not be published. Required fields are marked *