ಬಾಂಬ್ ಸ್ಕ್ವಾಡ್ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ
1 min readಮೈಸೂರು: ಮೈಸೂರಿನಲ್ಲಿ ಬಾಂಬ್ ಸ್ಕ್ವಾಡ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೈಸೂರಿನ ಬಾಂಬ್ ಸ್ಕ್ವಾಡ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿ.ಎ.ಆರ್. ಪೊಲೀಸ್ ಕಾನ್ಸ್ಟೇಬಲ್ ಮೋಹನ್ ವರುಣಾ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೈಸೂರಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.