ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಬೇಡ- ಪ್ರಮೋದಾ ದೇವಿ ಒಡೆಯರ್!

1 min read

ಮೈಸೂರು : ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಬೇಡ ಎಂದು ಸರ್ಕಾರಕ್ಕೆ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಸಲಹೆ‌ ನೀಡಿದರು.

ಇಂದು ಅರಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು 20 ನಿಮಿಷದ ಪ್ರ ವಾಸಕ್ಕೆ ರೋಪ್ ವೇ ಯಾಕೆ ? ಬೆಟ್ಟಕ್ಕೆ ಕಾರಿನಲ್ಲಿ ,ಬೈಕ್ ನಲ್ಲಿ ಹೋಗೋಕೆ 20 ನಿಮಿಷ ಸಾಕು. ಮೆಟ್ಟಿಲು ಮಾರ್ಗವಾಗಿ ಹೋಗಲು 30 ನಿಮಿಷ ಸಾಕು. ಹೀಗಿರುವಾಗ ರೋಪ್ ವೇ ಅವಶ್ಯಕತೆ ಇದೆಯೇ ಅನ್ನೋದು ನನ್ನ ಅಭಿಪ್ರಾಯ. ಚಾಮುಂಡಿ ಬೆಟ್ಟದ ಪ್ರಾಕೃತಿಕ ಸೌಂದರ್ಯದ ಸಂರಕ್ಷಣೆ ಆಗಬೇಕು. ಬೆಟ್ಟದ ಮೇಲೆ ಟೌನ್ ಶಿಪ್ ನಿರ್ಮಾಣ ಆಗೋದು ಬೇಡ‌. ಮೂಲ ನಿವಾಸಿಗಳನ್ನು ಬಿಟ್ಟರೆ ಅನ್ಯರ ವಾಸ್ತವ್ಯಕ್ಕೆ ಅವಕಾಶ ನೀಡಬಾರದು. ಕಟ್ಟಡ ನಿರ್ಮಾಣ ಕಾರ್ಯಕ್ಕೆ ಸೂಕ್ತ ನಿರ್ಬಂಧ ವಿಧಿಸಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

ಲ್ಯಾನ್ಸ್ಡೌನ್ ಕಟ್ಟಡ ಮತ್ತು ದೇವರಾಜ ಮಾರುಕಟ್ಟೆ ಕೆಡವಬಾರದು‌‌. ಹೀಗೆ ಕಟ್ಟಡಗಳನ್ನು ಕೆಡವುದರಿಂದ ಮೈಸೂರಿನ ಪಾರಂಪರಿಕ ಮೌಲ್ಯಕ್ಕೆ ಧಕ್ಕೆ ಆಗುತ್ತದೆ. ಎರಡೂ ಕಟ್ಟಡಗಳ ನವೀಕರಣ ನಮಗೆ ಬೇಕಿದ್ದರೆ ಅದನ್ನು ಯಥಾಸ್ಥಿತಿಯಲ್ಲಿ ನವೀಕರಣ ಮಾಡಲು ಸಿದ್ದರಿದ್ದೇವೆ‌.


ಇದೇ ಕಾರಣಕ್ಕೆ ಜಗನ್ಮೋಹನ ಅರಮನೆ,ರಾಜೇಂದ್ರ ವಿಲಾಸ ಅರಮನೆ ಯಥಾಸ್ಥಿತಿಯಲ್ಲಿ ನವೀಕರಣ ಮಾಡಿದ್ದೇವೆ. ಪಾರಂಪರಿಕ ಕಟ್ಟಡಗಳ ವಿಚಾರದಲ್ಲಿ ಸರ್ಕಾರ ಜಾಗ್ರತೆ ವಹಿಸಬೇಕು ಎಂದು ತಿಳಿಸಿದರು. ಚಾಮುಂಡಿ ಬೆಟ್ಟದ ಮೇಲಿರುವ 120 ಅಡಿ ಎತ್ತರದಲ್ಲಿರೋ ರಾಜೇಂದ್ರ ವಿಲಾಸ ಅರಮನೆ ಬಹಳ‌ ದಿ‌ನಗಳಿಂದ ಪ್ರವಾಸಿಗರಿಗೆ ಮುಚ್ಚಿತ್ತು. ರಾಜೇಂದ್ರ ವಿಲಾಸ ಅರಮನೆ ಕಟ್ಟಡದ ಬಲಿಷ್ಠತೆ ಉತ್ತಮವಾಗಿದೆ. ತಜ್ಞರ ಅಭಿಪ್ರಾಯ‌ ಪಡೆದು ನವೀಕರಣ ಮಾಡಲಾಗುವುದು. ಅರಮನೆಯ ಪುರಾತನ ಪಾರಂಪರಿಕ ಶೈಲಿಯಲ್ಲೇ ನವೀಕರಣ ಮಾಡಲಾಗುವುದು. 1975ರಿಂದ ರಾಜೇಂದ್ರ ವಿಲಾಸ ಅರಮನೆ ಹೋಟೆಲ್ ಆಗಿ ನಡೆಯುತ್ತಿತ್ತು.
1995ರಿಂದ ರಾಜೇಂದ್ರ ವಿಲಾಸ ಅರಮನೆ ಮುಚ್ಚಲ್ಪಟ್ಟಿತ್ತು.


ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಯಾವುದನ್ನೂ ಬದಲಾವಣೆ ಮಾಡಿಲ್ಲ, ಕೆಲವೊಂದು ಸೇವೆಗಳಲ್ಲಿ ಮಾರ್ಪಾಡು ಮಾಡಬಹುದಷ್ಟೇ. ಗೋಪುರದ ನವೀಕರಣ ಮಾಡುವುದು ಬಹಳ ಸವಾಲಾಗಿತ್ತು. ಎಲ್ಲವೂ ಒಂದು ಹಂತಕ್ಕೆ ಬಂದು ನಿಂತಿದೆ. ಹೋಟೆಲ್ ಆಗಿ ಮುಂದುವರೆಸುವ ಉದ್ದೇಶವಿದೆ ಎಂದು ನವೀಕರಣ ಕಾಮಗಾರಿಯ ಚಿತ್ರಗಳನ್ನು ಪ್ರದರ್ಶಿಸಿ ವಿವರ ನೀಡಿದರು.

About Author

Leave a Reply

Your email address will not be published. Required fields are marked *