ಮೈಸೂರಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಮತ್ತಷ್ಟು ಸ್ಟ್ರಾಂಗ್- ಪ್ರವೀಣ್ ಸೂದ್ ಮೀಟಿಂಗ್!
1 min readಮೈಸೂರು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಮತ್ತಷ್ಟು ಭದ್ರಪಡಿಸಲು ಡಿಜಿ ಅಂಡ್ ಐಜಿಪಿ ಪ್ರವೀಣ್ ಸೂದ್ ಪೊಲೀಸರ ಜೊತೆ ಮೀಟಿಂಗ್ ಆರಂಭಿಸಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಯುತ್ತಿದ್ದು ಸಭೆಯಲ್ಲಿ ಎಡಿಜಿಪಿ ಪ್ರತಾಪ್ ರೆಡ್ಡಿ, ದಕ್ಷಿಣ ವಲಯದ ಐಜಿಪಿ ಮಧುಕರ್ ಪವಾರ್, ಮೈಸೂರು ಪೋಲಿಸ್ ಕಮಿಷನರ್ ಡಾ.ಚಂದ್ರಗುಪ್ತ, ಮೈಸೂರು ಎಸ್ಪಿ ಚೇತನ್, ಡಿಸಿಪಿ ಪ್ರವೀಣ್, ಗೀತಾ ಪ್ರಸನ್ನ ಸೇರಿದಂತೆ ಪ್ರಮುಖ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ. ಈಗಾಗಲೇ ದೇಶದಲ್ಲಿ ಸುಭದ್ರ ನಗರ ಎಂಬ ಖ್ಯಾತಿ ಹೊಂದಿರೋ ಮೈಸೂರಿನಲ್ಲಿ ಮತ್ತಷ್ಟು ಕಾನೂನು ಸುವ್ಯವಸ್ಥೆ ಭದ್ರಪಡಿಸಲು ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ.