150ಕ್ಕೂ ಹೆಚ್ಚು ಪತ್ರಕರ್ತರಿಗೆ ಆರೋಗ್ಯ ತಪಾಸಣೆ

1 min read

ಮೈಸೂರು,ಸೆ.18-ಜಿಲ್ಲಾ ಪತ್ರಕರ್ತರ ಸಂಘವು ನಗರದ ಸೆಕ್ಯೂರ್ ಖಾಸಗಿ ಆಸ್ಪತ್ರೆ ಸಹಯೋಗದಲ್ಲಿ ಇಂದು ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ 150ಕ್ಕೂ ಹೆಚ್ಚು ಪತ್ರಕರ್ತರು ಹಾಗೂ ಅವರ ಕುಟುಂಬದವರಿಗೆ ತಪಾಸಣೆ ನಡೆಸಲಾಯಿತು.
ಬೆಳಿಗ್ಗೆ 8.30ರಿಂದ ಮಧ್ಯಾಹ್ನ 3ಗಂಟೆಯವರೆಗೆ ನಡೆದ ಶಿಬಿರದಲ್ಲಿ ಪತ್ರಕರ್ತರು ಮತ್ತು ಅವರ ಕುಟುಂಬ ವರ್ಗದವರಿಗೆ ತೂಕ, ಎತ್ತರ, ರಕ್ತದೊತ್ತಡ, ಸಕ್ಕರೆ ಪ್ರಮಾಣ, ಸಾಮಾನ್ಯ ತಪಾಸಣೆ ಜೊತೆಗೆ ಇಸಿಜಿ ಪರೀಕ್ಷೆಗಳನ್ನು ನಡೆಸಲಾಯಿತು. ತಪಾಸಣೆಗೆ ಒಳಗಾದವರಲ್ಲಿ ಅಗತ್ಯ ಇದ್ದವರಿಗೆ ಉಚಿತವಾಗಿ ಔಷಧಗಳನ್ನು ನೀಡಲಾಯಿತು.

ಆರೋಗ್ಯ ತಪಾಸಣೆ ನಡೆಸುತ್ತಿರುವುದು


ಇದಕ್ಕೂ ಮೊದಲು ಸೆಕ್ಯೂರ್ ಆಸ್ಪತ್ರೆಯ ಮುಖ್ಯಸ್ಥರಾದ ಡಾ.ಶ್ರೀಧರ್ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪತ್ರಕರ್ತರು ಬಹಳ ಒತ್ತಡದಲ್ಲಿ ಕೆಲಸ ನಿರ್ವಹಿಸುವ ಕಾರಣ ರಕ್ತದೊತ್ತಡ, ಸಕ್ಕರೆ ಕಾಯಿಲೆಯಂತಹ ರೋಗಗಳಿಗೆ ತುತ್ತಾಗುತ್ತಾರೆ. ಆದ್ದರಿಂದ ನಿಯಮಿತವಾಗಿ ಆರೋಗ್ಯ ತಪಾಸಣೆಗೆ ಒಳಗಾಗುವ ಮೂಲಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕು ಎಂದರು.
ಶಿಬಿರದಲ್ಲಿ ಆಸ್ಪತ್ರೆಯ ವೈದ್ಯರಾದ ಡಾ.ವಿಶ್ವಾಸ್, ಡಾ.ಐಶ್ವರ್ಯ ರಮೇಶ್, ಡಾ.ನಿವೇದಿತಾ ಗೌಡ, ಡಾ.ಚೇತನ್, ದಾದಿಯರಾದ ಆಶಾ, ಸವಿತಾ, ಶಿವಮ್ಮ, ಮಹೇಶ್ವರಿ ಮೊದಲಾದವರು ತಪಾಸಣೆ ಮಾಡಿದರು. ಚಂದ್ರು ಔಷಧಗಳನ್ನು ವಿತರಿಸಿದರು.
ಈ ವೇಳೆ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ಸುಬ್ರಹ್ಮಣ್ಯ, ನಗರ ಉಪಾಧ್ಯಕ್ಷ ಅನುರಾಗ್ ಬಸವರಾಜ್, ನಗರ ಕಾರ್ಯದರ್ಶಿ ಪಿ.ರಂಗಸ್ವಾಮಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಕೃಷ್ಣೋಜಿರಾವ್, ರಂಗಸ್ವಾಮಿ ಮಾದಾಪುರ, ಶಿವಮೂರ್ತಿ ಜುಪ್ತಿಮಠ, ಸೆಕ್ಯೂರ್ ಆಸ್ಪತ್ರೆಯ ಪ್ರಧಾನ ವ್ಯವಸ್ಥಾಪಕ ಪೆರಿಯಾ, ಆಡಳಿತಾಧಿಕಾರಿ ತಪೋರಾಜು, ನರ್ಸಿಂಗ್ ಸೂಪರಿಂಟೆಂಡೆಂಟ್ ಕೇಶವ್, ಮಾರುಕಟ್ಟೆ ವಿಭಾಗದ ನಿರಂಜನ್, ಜೋಷ್ವಾ, ಶಿವು, ಚಿಕ್ಕಸ್ವಾಮಿ ಮೊದಲಾದವರು ಹಾಜರಿದ್ದರು.

About Author

Leave a Reply

Your email address will not be published. Required fields are marked *