September 9, 2024

ತಮಿಳುನಾಡು- ಅಣ್ಣಾಮಲೈ ವಿರುದ್ಧ ಕನ್ನಡಿಗೆ ಆಕ್ರೋಶ!

1 min read

ಮೈಸೂರು : ಮೇಕೆದಾಟು ಯೋಜನೆ ಆರಂಭಿಸುವಂತೆ ಮೈಸೂರಿನಲ್ಲಿ ಕರ್ನಾಟಕ ಸೇನಾಪಡೆ ಒತ್ತಾಯ ಮಾಡಿದೆ. ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಮೇಕೆದಾಟು ಯೋಜನೆ ಜಾರಿಗೆ ಆಗಲೇಬೇಕೆಂದು ತಮಿಳುನಾಡು ಸರ್ಕಾರ ಹಾಗೂ ಅಣ್ಣಾಮಲೈ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಮೇಕೆದಾಟು ಯೋಜನೆಯನ್ನು ಕೂಡಲೇ ಪ್ರಾರಂಭಿಸಬೇಕು. ನಮ್ಮ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ, ಕೇಂದ್ರದಲ್ಲೂ ಬಿಜೆಪಿ ಇದೆ. ಇಲ್ಲಿನ ಸಂಸದರು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಿ ಮೇಕೆದಾಟು ಯೋಜನೆ ಆರಂಭಿಸಬೇಕು. ಯೋಜನೆ ಪ್ರಾರಂಭಿಸಿ ರಾಜ್ಯದ ಜನತೆಗೆ ಅನುಕೂಲ ಮಾಡಿಕೊಡಬೇಕು.

ಈಗಾಗಲೇ ಮೇಕೆದಾಟು ಯೋಜನೆಗಾಗಿ ನಾವು ಸಾಕಷ್ಟು ಹೋರಾಟ ಮಾಡಿದ್ದೇವೆ. ಮೇಕೆದಾಟು ಯೋಜನೆಯಿಂದ ಕರ್ನಾಟಕ, ತಮಿಳುನಾಡು ಎರಡು ರಾಜ್ಯಕ್ಕೂ ಉಪಯೋಗವಾಗಲಿದೆ. ಕಾವೇರಿ ನೀರು ವ್ಯರ್ಥವಾಗಿ ಸಮುದ್ರದ ಪಾಲಾಗುತ್ತಿದೆ. ಮೇಕೆದಾಟು ಯೋಜನೆಯಿಂದ ಎರಡು ರಾಜ್ಯದ ರೈತರಿಗೂ ಉಪಯೋಗವಾಗುವುದರ ಜೊತೆಗೆ ಕುಡಿಯುವ ನೀರಿನ ಸಮಸ್ಯೆ ಹೋಗಲಿದೆ. ಇನ್ನಾದರೂ ಎಚ್ಚೆತ್ತು ಸರ್ಕಾರ ಮೇಕೆದಾಟು ಯೋಜನೆ ಆರಂಭಿಸಬೇಕೆಂದು ಒತ್ತಾಯ ಮಾಡಿದ್ದಾರೆ.

About Author

Leave a Reply

Your email address will not be published. Required fields are marked *