ಕೊರೊನಾಗೆ ಪುಟ್ಟಣ್ಣ ಕಣಗಾಲ್ ಪುತ್ರ ಶ್ರೀರಾಮು ಕಣಗಾಲ್ ಬಲಿ
1 min read
ಬೆಂಗಳೂರು: ಮಹಾಮಾರಿ ಕೊರೊನಾಗೆ ಚಂದನವನದ ಹಿರಿಯ ನಿರ್ದೇಶಕ ಪುಟ್ಟಣ್ಣ ಕಣಗಾಲ್ರ ಪುತ್ರ ಶ್ರೀರಾಮು ಕಣಗಾಲ್ ಬಲಿಯಾಗಿದ್ದಾರೆ.
ಕೆಲ ದಿನಗಳ ಹಿಂದೆ ಅನಾರೋಗ್ಯದ ಹಿನ್ನೆಲೆ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾಗ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಮು ಕಣಗಾಲ್ ಅವರ ಆರೋಗ್ಯ ಕಳೆದ 5 ದಿನಗಳಿಂದ ಗಂಭೀರವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ.

ಶ್ರೀರಾಮು ಕಣಗಾಲ್ ಅವರು ‘ಕಣಗಾಲ್ ನೃತ್ಯಾಲಯ’ ನಾಟ್ಯ ಶಾಲೆ ನಡೆಸುತ್ತಿದ್ದರು. ಚೆನ್ನೈನಲ್ಲಿ ವಿದ್ಯಾಭ್ಯಾಸ ಪಡೆದಿದ್ದ ರಾಮು ಅವರು ಬೆಂಗಳೂರಿನಲ್ಲಿ ವಾಸವಾಗಿದ್ದರು.
