ರಾಹುಲ್ ಗಾಂಧಿ ಕಾರ್ಯಕ್ರಮದ ಸ್ಥಳ ಪರಿಶೀಲನೆ ಮಾಡಿದ ಸಿದ್ದರಾಮಯ್ಯ!
1 min readರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 30 ರಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಮೂಲಕ ರಾಜ್ಯ ಪ್ರವೇಶಿಸಲಿದೆ.
ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಗುಂಡ್ಲುಪೇಟೆಯಿಂದ ಮೈಸೂರು ವರೆಗೆ ಯಾತ್ರೆ ಸಾಗುವ ಮಾರ್ಗ ಹಾಗೂ ವಾಸ್ತವ್ಯ ಸ್ಥಳದ ಪರಿಶೀಲನೆ ನಡೆಸಿದರು. ಚಾಮರಾಜನಗರ ಜಿಲ್ಲಾ ಎಸ್ಪಿ ಶಿವಕುಮಾರ್ ಹಾಗೂ ಇತರ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ, ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಪಕ್ಷದ ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಡಾ. ವಿಜಯಕುಮಾರ್, ಚಾಮರಾಜನಗರ ಜಿಲ್ಲಾಧ್ಯಕ್ಷ ಮರಿಸ್ವಾಮಿ ಹಾಜರಿದ್ದರು.