ರಾಹುಲ್ ಗಾಂಧಿ ಜನ್ಮದಿನ ಅಂಗವಾಗಿ ಸೇವಾದಳ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ವಿತರಣೆ
1 min read
ಬೆಂಗಳೂರು: ರಾಹುಲ್ ಗಾಂಧಿಯವರ ಜನ್ಮದಿನದ ಅಂಗವಾಗಿ ರೇಸ್ ಕೋರ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಇಂದು ಸೇವಾದಳ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ವಿತರಿಸುವ ಕಾರ್ಯಕ್ರಮವನ್ನು ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸ್ವತಃ ವೈದ್ಯರೂ ಆಗಿರುವ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ. ಅಜಯ್ ಸಿಂಗ್ ಅವರು ಕಾರ್ಯಕರ್ತರಿಗೆ ಲಸಿಕೆ ಹಾಕಿದರು.
