ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೆರಡು ದಿನ ಮಳೆ: ಹವಾಮಾನ ಇಲಾಖೆ!
1 min readಬೆಂಗಳೂರು : ಎರಡ್ಮೂರು ದಿನದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಪ್ರಮಾನ ಸ್ವಲ್ಪ ತಗ್ಗಿದ್ದು, ಇಂದು ಕೆಲವೆಡೆ ಬೆಳಗ್ಗೆಯಿಂದಲೇ ತುಂತುರು ಮಳೆ ಆರಂಭವಾಗಿದೆ. ಬೆಂಗಳೂರಿನ ಸುತ್ತಮುತ್ತ ನವೆಂಬರ್ 28ರವೆಗೆ ಮತ್ತೆ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಚೆನ್ನೈಗೆ ಅಪ್ಪಳಿಸುವ ಚಂಡಮಾರುತ ಕರ್ನಾಟಕಕ್ಕೂ ಎಫೆಕ್ಟ್ ನೀಡಿಲಿದ್ದು, ಬೆಂಗಳೂರು , ಮೈಸೂರು ಭಾಗ, ಉಡುಪಿ ಸೇರಿದಂತೆ ಕರ್ನಾಟಕದ ಕೆಲವು ಕಡೆ ಇನ್ನೆರಡು ದಿನ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇಂದು ಉಡುಪಿ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿಯಲ್ಲಿ ಹೆಚ್ಚು ಮಳೆಯಾಗಲಿದ್ದು,ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ಚಂಡಮಾರುತದ ಭೀತಿ ಎದುರಾಗಿರುವುದರಿಂದ ಮುಂಜಾಗ್ರತಾ ಕ್ರಮ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.