ಮೈಸೂರು ಸೇರಿ ಹಲವು ಜಿಲ್ಲೆಯಲ್ಲಿ ನ.20 ರ ವರೆಗು ಮಳೆ!
1 min readಮೈಸೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ನವೆಂಬರ್ 20ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ.
ಈಶಾನ್ಯ ಮುಂಗಾರು ಮಳೆ ಕಳೆದ ಎರಡು ವಾರಗಳಲ್ಲಿ ವಾಡಿಕೆಗಿಂತ ಶೇ.100ರಷ್ಟು ಹೆಚ್ಚು ಬಿದ್ದಿದೆ. ನ.1ರಿಂದ ನಿನ್ನೆಯವರೆಗೆ ರಾಜ್ಯದ ವಾಡಿಕೆ ಮಳೆ ಪ್ರಮಾಣ 24.6 ಮಿ.ಮೀ. ಆಗಿದ್ದು , 49.3 ಮಿ.ಮೀ.ನಷ್ಟು ಮಳೆಯಾಗಿದೆ. ಇದು ವಾಡಿಕೆಗಿಂತ ಶೇ.100ರಷ್ಟು ಹೆಚ್ಚಾದಂತಾಗಿದೆ. ಆದರೆ, ಉತ್ತರ ಒಳನಾಡಿನಲ್ಲಿ ಮಳೆ ಕೊರತೆ ಕಂಡು ಬಂದಿದ್ದು, ವಾಡಿಕೆಗಿಂತ ಶೇ.30ರಷ್ಟು ಕಡಿಮೆ ಮಳೆಯಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ನೈರುತ್ಯ ಮುಂಗಾರು ಅವಯಲ್ಲಿ ವಾಡಿಕೆಗಿಂತ ಶೇ.35ರಷ್ಟು ಹೆಚ್ಚು ಮಳೆಯಾಗಿತ್ತು. ಈ ಅವಯಲ್ಲಿ ದಕ್ಷಿಣ ಒಳನಾಡಿನಲ್ಲಿ ಶೇ.87, ಮಲೆನಾಡಿನಲ್ಲಿ ಶೇ.62, ಕರಾವಳಿ ಭಾಗದಲ್ಲಿ ಶೇ.57ರಷ್ಟು ವಾಡಿಕೆಗಿಂತ ಅಕ ಮಳೆಯಾಗಿವೆ. ಆದರೆ, ಈ ಅವಯಲ್ಲೂ ಉತ್ತರ ಒಳನಾಡಿನಲ್ಲಿ ಶೇ.26ರಷ್ಟು ಮಳೆ ಕೊರತೆ ಕಂಡುಬಂದಿದೆ.
ಕಳೆದ 2 ವಾರಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಶೇ.147ರಷ್ಟು, ಮಲೆನಾಡಿನಲ್ಲಿ 157 ಹಾಗೂ ಕರಾವಳಿಯಲ್ಲಿ 191ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.
ಅ.1ರಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಶೇ.46ರಷ್ಟು ಅಧಿಕ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಶೇ.98, ಕರಾವಳಿ ಹಾಗೂ ಮಲೆನಾಡಿನಲ್ಲಿ ಶೇ.78ರಷ್ಟು ಹೆಚ್ಚು ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಈ ಅವಯಲ್ಲೂ ಶೇ.28ರಷ್ಟು ಮಳೆ ಕೊರತೆಯಾಗಿರುವುದು ಕಂಡು ಬಂದಿದೆ.
ಜನವರಿ 1 ರಿಂದ ಈ ತನಕ ರಾಜ್ಯದಲ್ಲಿ ಸರಾಸರಿ ವಾಡಿಕೆ ಪ್ರಮಾಣ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಮಾತ್ರ ವಾಡಿಕೆಗಿಂತ ಶೇ.32ರಷ್ಟು ಹೆಚ್ಚು ಮಳೆಯಾಗಿದೆ.
ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಿನಲ್ಲಿ ನಿರಂತರವಾಗಿ ಮಳೆಯಾದ ಪರಿಣಾಮ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಆದರೆ, ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಕೊರತೆ ಮುಂದುವರೆದಿದೆ. ಈ ಭಾಗದಲ್ಲಿ ಹಿಂಗಾರು ಹಂಗಾಮಿನ ವಿವಿಧ ಬೆಳೆಗಳನ್ನು ಬೆಳೆಯಲಾಗುತ್ತದೆ. ಈ ಭಾಗದ ರೈತರು ಮಳೆಯ ನಿರೀಕ್ಷೆಯಲ್ಲಿದ್ದಾರೆ.
ಎಲ್ಲೆಲ್ಲಿ ಮಳೆಯಾಗಿದೆ..?
ಮುಲ್ಕಿ,ಕೋಟ, ಕಾರ್ಕಳ, ಧರ್ಮಸ್ಥಳ, ಭದ್ರಾವತಿ, ಬೆಳ್ತಂಗಡಿ, ಶಿವಮೊಗ್ಗ, ತ್ಯಾಗರ್ತಿ, ಕೊಪ್ಪ, ಶಿಕಾರಿಪುರ, ಮಾಣಿ, ತರಿಕೆರೆ, ಮಂಗಳೂರು, ಪಣಂಬೂರು, ಪುತ್ತೂರು, ವಿಟ್ಲ, ಜಯಪುರ, ಸಾಗರ, ಅರಸಿಕೆರೆ, ಭಟ್ಕಳ, ಶಿರಾಲಿ, ಸಿದ್ದಾಪುರ, ಕಳಸ, ಹೊನ್ನಾವರ, ಗೇರುಸೊಪ್ಪ, ಜಾನ್ಮನೆ, ಸುಬ್ರಹ್ಮಣ್ಯ, ಗುಬ್ಬಿ, ಹುಂಚದಕಟ್ಟೆ, ತೀರ್ಥಹಳ್ಳಿ, ಬಾಳೆಹೊನ್ನೂರು, ಅಜ್ಜಂಪುರ, ಕುಮಟಾ, ಬನವಾಸಿ, ಉತ್ತರಹಳ್ಳಿ, ಚಿಕ್ಕಮಗಳೂರು, ಬರಗೂರು, ಪಾವಗಡ, ಲಿಂಗನಮಕ್ಕಿ, ಚಳ್ಳಕೆರೆ, ಮಡಿಕೇಋಇ, ನಾಪೊಕ್ಲು, ಸೋಮವಾರಪೇಟೆ, ಗೋಪಾಲನಗರ, ಶಿಡ್ಲಘಟ್ಟ, ಶ್ರವಣಬೆಳಗೊಳ, ಚನ್ನಗಿರಿಯಲ್ಲಿ ಮಳೆಯಾಗಿದೆ.
ಬೆಂಗಳೂರು ವಾತಾವರಣ ಹೇಗಿದೆ..?
ಬೆಂಗಳೂರಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ, 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್ಎಎಲ್ನಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕನಿಷ್ಠ ಉಷ್ಣಾಂಶ
ದಾವಣಗೆರೆಯಲ್ಲಿ 19.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಮುಂಗಾರು ಹಂಗಾಮಿನ ಬಹುತೇಕ ಬೆಳೆಗಳು ಕೊಯ್ಲಿಗೆ ಬಂದಿದ್ದು, ಮಳೆ ಬಿಡುವು ಕೊಡುವುದನ್ನೇ ರೈತರು ಎದುರು ನೋಡುತ್ತಿದ್ದಾರೆ. ಹಲವು ಕಡೆಗಳಲ್ಲಿ ಎಡೆಬಿಡದೆ ಸುರಿದ ಮಳೆಗೆ ರಾಗಿ, ಭತ್ತ ಸೇರಿದಂತೆ ವಿವಿಧ ಬೆಳೆಗಳು ಹಾನಿಗೀಡಾಗಿವೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್. ಪ್ರಕಾಶ್ಅವರ ಪ್ರಕಾರ ಇನ್ನೆರಡು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಲಿದೆ. ಕೋಲಾರದಿಂದ ಬಳ್ಳಾರಿಯವರೆಗೂ, ಬೆಂಗಳೂರು ಸೇರಿದಂತೆ ಮೈಸೂರು, ಚಾಮರಾಜನಗರದವರೆಗೂ ಅಲ್ಲಲ್ಲಿ ಮಳೆಯಾಗುವ ಸಂಭವವಿದೆ ಎಂದು ಅವರು ತಿಳಿಸಿದರು.
ಬೆಂಗಳೂರು, ಸೇರಿದಂತೆ ರಾಜ್ಯ ಹಲವು ಭಾಗಗಳಲ್ಲಿ ಸಾಧಾರಣ ಪ್ರಮಾಣದ ಮಳೆಯಾದ ವರದಿಯಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದ್ದು, ಇನ್ನೂ ಕೆಲವು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಹೇಳಿದರು.
ರಾಜ್ಯದ ವಾತಾವರಣ ಹೇಗಿರಲಿದೆ?
ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.