September 9, 2024

ಬಿಗ್ ಬಾಸ್ ಬಂದ್: ಶೋ ಸ್ಥಗಿತಕ್ಕೆ ಕಾರಣ ತಿಳಿಸಿದ ಕಲರ್ಸ್ ವಾಹಿನಿಯ ಬಿಸ್ನೆಸ್ ಹೆಡ್!

1 min read

ಬೆಂಗಳೂರು: ಕನ್ನಡದ ಬಿಗ್ ಬಾಸ್ ಸೀಸನ್ 8 ಮುಗಿಯುತ್ತಿದೆ. 71 ದಿನಗಳ ಕಾಲ ನಡೆದ ಬಿಗ್ ಬಾಸ್ ಅಂತ್ಯಕಂಡಿದೆ‌. ಇದಕ್ಕೆ ಕಾರಣ- ಖುದ್ದು ಕಲರ್ಸ್ ವಾಹಿನಿಯ ಬಿಸ್ನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಕೊಟ್ಟ ಮಾಹಿತಿ ಇಲ್ಲಿದೆ ನೋಡಿ!

ಕಲರ್ಸ್ ವಾಹಿನಿಯ ಬಿಸ್ನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್

ಬಿಗ್ ಬಾಸ್ ಶುರುವಾಗಿ ಇವತ್ತಿಗೆ ಎಪ್ಪತ್ತೊಂದನೇ ದಿನ. ಪಿಸಿಆರ್‍ ನಲ್ಲಿ ನಿಂತು ಈ ಮನೇಲಿರೋ ಹನ್ನೊಂದು ಜನ ಓಡಾಡುತ್ತಿರುವುದನ್ನು ನೋಡಿದಾಗ ಒಂದಕ್ಕಿಂತ ಹೆಚ್ಚು ಭಾವನೆಗಳು ಒಂದೇ ಸಲಕ್ಕೆ ಬಂದು ಮನಸ್ಸಿಗೆ ವಿಚಿತ್ರವಾದ ತಳಮಳ. ಹೊರಗಡೆ ಎದುರಾಗಿರುವ ಕಷ್ಟದ ಸವಾಲು ಗೊತ್ತಿಲ್ಲದೇ ಒಳಗಡೆ ಇರುವವರೆಲ್ಲಾ ಖುಷಿಯಾಗಿದ್ದಾರೆ. ಐಸೋಲೇಷನ್ನಿನಲ್ಲಿ ಇರುವುದರಿಂದ ಸುರಕ್ಷಿತವಾಗಿಯೂ ಇದ್ದಾರೆ. ಎಲ್ಲರಿಗೂ ಹೊರಗಡೆ ಆಗಿರುವ ಬೆಳವಣಿಗೆ ತಿಳಿಸಿ ನಾಳೆ ಹೊರಗಡೆ ಕರೆಯುತ್ತಿದ್ದೇವೆ. ಅನಂತರ ಅವರನ್ನು ಮತ್ತು ತಂಡವನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲು ವ್ಯವಸ್ಥೆ ಆಗುತ್ತಿದೆ.

ನೂರಾರು ದಿನಗಳ ಕೆಲಸ. ನೂರಾರು ಜನರ ಕೆಲಸ. ಎಲ್ಲವನ್ನೂ ಪಕ್ಕಕ್ಕಿಟ್ಟು ಶ್ರದ್ಧೆಯಿಂದ ಕೆಲಸ ಮಾಡಿದ ಒಂದು ತಂಡದ ಕನಸು ಅರ್ಧಕ್ಕೇ ನಿಂತಿದೆ. ಕಷ್ಟದ ತೀರ್ಮಾನವಾದರೂ ಸಮಾಧಾನ ಕೊಟ್ಟ ತೀರ್ಮಾನ.

ಮನಸ್ಸು ಭಾರವಾಗಿದೆ. ಈ ಶೋ ನಿಲ್ಲುತ್ತಿದೆ ಅಂತಲ್ಲ. ಹೊರಗಡೆ ಗಾಳಿಯಲ್ಲಿ ಓಡಾಡುತ್ತಿರುವ ಕಣ್ಣಿಗೆ ಕಾಣದ ಅನಿಶ್ಚಿತತೆಯಿಂದ ಇನ್ನಿಲ್ಲದ ಕಳವಳ.

ಎಲ್ಲರಿಗೂ ಈ ಕಳವಳಕ್ಕೊಂದು ಉತ್ತರ ಬೇಗ ಸಿಗಲಿ. ಸುರಕ್ಷಿತವಾಗಿರಿ.

ನಿಮ್ಮ ವಿಶ್ವಾಸಿ ಪರಮೇಶ್ವರ್ ಗುಂಡ್ಕಲ್- ಬಿಜಿನೆಸ್ ಹೆಡ್ ಕಲರ್ಸ್ ವಾಹಿನಿ…

About Author

Leave a Reply

Your email address will not be published. Required fields are marked *