ರಾಜ್ಯದಲ್ಲಿ ಕ್ಯಾಂಟೀನ್ ಗೆ ಹೆಸರಿಡುವಾಗ ನಾರಾಯಣ ಗುರು ಹೆಸರು ನೆನಪಾಗಲಿಲ್ಲವೇ? ಸಿದ್ದು ವಿರುದ್ಧ ಸಿಂಹ ವಾಗ್ದಾಳಿ

1 min read

ಮೈಸೂರು,ಜ.19-ರಾಜ್ಯದಲ್ಲಿ ಕ್ಯಾಂಟೀನ್ ಗೆ ಹೆಸರಿಡುವಾಗ ಸಿದ್ದರಾಮಯ್ಯ ಅವರಿಗೆ ನಾರಾಯಣ ಗುರು ಅವರ ಹೆಸರು ನೆನಪಾಗಲಿಲ್ಲವೇ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.
ನಾರಾಯಣ ಗುರುಗಳ ಸ್ಥಬ್ಧ ಚಿತ್ರಕ್ಕೆ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಅವಕಾಶ ಸಿಗದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿರುವ ವಿಚಾರವಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಾಪ್ ಸಿಂಹ ಮಾತನಾಡುವ ವೇಳೆ ಸಿದ್ದು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಕ್ಯಾಂಟಿನ್ ಗೆ ಹೆಸರಿಡುವಾಗ. ಈ ನೆಲದ ಮಹಾಪುರುಷರ ಹೆಸರು ಅವರಿಗೆ ನೆನಪಾಗಲಿಲ್ಲ. ಸಿದ್ದರಾಮಯ್ಯಗೆ ಆಗ ನೆನಪಾಗಿದ್ದು ಇಂದಿರಾಗಾಂಧಿ ಹೆಸರು ಮಾತ್ರ. ಅಧಿಕಾರದಲ್ಲಿ ಇರುವಾಗ ಅವರಿಗೆ ಮಹಾನೀಯರು ನೆನಪಾಗುವುದಿಲ್ಲ. ಅಧಿಕಾರ ಹೋದ ಮೇಲೆ ಮಹಾನೀಯರು ನೆನಪಾಗುತ್ತಾರೆ. ನಾರಾಯಣ ಗುರುಗಳು, ಒನಕೆ ಓಬವ್ವ, ಮೈಸೂರು ಮಹಾರಾಜರು ಎಂದಿಗೂ ಸಿದ್ದರಾಮಯ್ಯಗೆ ಅಧಿಕಾರದಲ್ಲಿ ಇದ್ದಾಗ ನೆನಪಾಗಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಮಾಲೆ ಕಣ್ಣಿಗೆ ನೋಡುವುದೆಲ್ಲಾ ಹಳದಿ ಎಂಬಂತಾಗಿದೆ ಸಿದ್ದರಾಮಯ್ಯ ಅವರ ವರ್ತನೆ. ಈಗ ಭೂತದ ಬಾಯಲ್ಲಿ ಭಗವದ್ಗಿತೆ ಎಂಬಂತೆ. ಮಹಾನೀಯರಿಗೆ ಗೌರವ ಕೊಡುವುದನ್ನು ನಮಗೆ ಹೇಳುತ್ತಿದ್ದಾರೆ. ಗಣರಾಜ್ಯೋತ್ಸವದಲ್ಲಿ ಒಂದು ವಿಷಯ ಕೊಟ್ಟಿದ್ದಾರೆ. ಆ ವಿಷಯಕ್ಕೆ ಅನುಗುಣವಾಗಿ ಯಾರು ಸ್ತಬ್ಧ ಚಿತ್ರ ಮಾಡಿರುತ್ತಾರೋ ಹಾಗೂ ಗುಣಮಟ್ಟದ ಆಧಾರದ ಮೇಲೆ ಅದರ ಆಯ್ಕೆ ಆಗುತ್ತದೆ ಆಯ್ಕೆ ಪ್ರಕ್ರಿಯೆ ಪಾರದಾರ್ಶಕವಾಗಿರುತ್ತೆ. ಇಲ್ಲಿ ಯಾರ ಅವಮಾನದ ಪ್ರಶ್ನೆಯೇ ಇರುವುದಿಲ್ಲ. ಸಿದ್ದರಾಮಯ್ಯ ಅವರು ಮೊದಲು ಗಣರಾಜ್ಯೋತ್ಸವದ ಸ್ಥಬ್ಧ ಚಿತ್ರಗಳ ಮಾರ್ಗ ಸೂಚಿ ಓದಿಕೊಳ್ಳಲಿ ಎಂದು ಹರಿಹಾಯ್ದಿದ್ದಾರೆ.

About Author

Leave a Reply

Your email address will not be published. Required fields are marked *