ನೈಟ್ ಕರ್ಫ್ಯೂ, ವೀಕೆಂಡ್ ಲಾಕ್ ಡೌನ್ ತೆಗೆಯಿರಿ: ಸಂಸದ ಪ್ರತಾಪ್ ಸಿಂಹ
1 min readಮೈಸೂರು,ಜ.19- ಜನರಿಗೆ ತೊಂದರೆಯಾಗುತ್ತಿರುವ ನೈಟ್ ಕರ್ಫ್ಯೂ, ವೀಕೆಂಡ್ ಲಾಕ್ ಡೌನ್ ತೆಗೆಯಿರಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ/
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಅಂತಾ ಜನರನ್ನು ಮತ್ತೆ ಕಂಗಾಲು ಮಾಡುತ್ತಿದ್ದಿರಾ? ಜನರನ್ನು ಭೀತಿಯಲ್ಲಿ ಇಡುವುದನ್ನು ಸರ್ಕಾರ ಮೊದಲು ನಿಲ್ಲಿಸಲಿ. ಲಾಕ್ ಡೌನ್, ಕರ್ಫ್ಯೂ ವಿಧಿಸೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? ಪಂಚ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ. ಅಲ್ಲಿ ಪ್ರಚಾರ ರ್ಯಾಲಿ ನಡೆಯುತ್ತದೆ ತಾನೇ? ಹೀಗಿರುವಾಗ ಕರ್ನಾಟಕದಲ್ಲಿ ಯಾಕೆ ಕರ್ಫ್ಯೂ? ಎಂದು ಪ್ರಶ್ನಿಸಿದ್ದಾರೆ.
ಕರ್ಫ್ಯೂ, ಲಾಕ್ ಡೌನ್ ನಿಂದ ಜನರಿಗೆ ಬಹಳ ತೊಂದರೆಯಾಗಿದೆ. ಜನರ ಜೀವನ, ಜೀವ ಎರಡು ಮುಖ್ಯ. ಜೀವ ಉಳಿಸಿ ಕೊಳ್ಳಲು ವ್ಯಾಕ್ಸಿನ್ ಕೊಟ್ಟಿದ್ದೇವೆ. ಈಗ ಜೀವನ ಉಳಿಯ ಬೇಕಾದರೆ ಕರ್ಫ್ಯೂ, ಲಾಕ್ ಡೌನ್ ತೆಗೆಯಿರಿ. ಸಿಎಂ ಈ ಬಗ್ಗೆ ಶುಕ್ರವಾರದ ಸಭೆಯಲ್ಲಿ ಒಳ್ಳೆಯ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ನಂಬಿಕೆ ಇದೆ ಎಂದರು.