ಮೈಸೂರಿನಲ್ಲಿ ಆಕ್ಸಿಜನ್ ಬಸ್ ಸೇವೆ ಆರಂಭಿಸಲು ಮನವಿ
1 min readಮೈಸೂರು: ಮೈಸೂರಿನಲ್ಲಿ ಆಕ್ಸಿಜನ್ ಬಸ್ ಸೇವೆ ಆರಂಭಿಸಿ ಅವಶ್ಯಕತೆ ಇರುವ ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಬಸ್ ಸೇವೆ ನೀಡಿ ಎಂದು ಸರ್ಕಾರಕ್ಕೆ ಎನ್.ಆರ್.ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಪತ್ರ ಬರೆದಿದ್ದಾರೆ.
ಕೊರೊನಾ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಿ. ವೈದ್ಯಕೀಯ ವಸ್ತುಗಳ ಖರೀದಿಗೆ ವಿನಾಯಿತಿ ನೀಡಬೇಕು. ಔಷಧಿ, ಚುಚ್ಚುಮದ್ದು ಸಮರ್ಪಕ ಸರಬರಾಜಿಗೆ ಆದ್ಯತೆ ನೀಡಿ ಅಂತ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗೆ ಪತ್ರ ಬರೆದಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಕ್ಸಿನೇಷನ್ ಬಗ್ಗೆ ಅರಿವು ಮೂಡಿಸಬೇಕು. ಆಶಾಕಾರ್ಯಕರ್ತೆಯರು ಹಾಗೂ ಗ್ರಾ.ಪಂ ಸಿಬ್ಬಂದಿಗಳು ಈ ಕೆಲಸ ಮಾಡಲಿ. ಅಲ್ಲದೇ ಜಿಲ್ಲೆಯಲ್ಲಿ ತುರ್ತುವಾಹನಗಳ ಸಂಖ್ಯೆಯನ್ನ ಹೆಚ್ಚಸಬೇಕು. ತಜ್ಞರ ಸಮಿತಿ ರಚನೆ ಮಾಡಿ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಿಸಿ ಅಂತ ಶಾಸಕ ತನ್ವೀರ್ ಸೇಠ್ ಉಸ್ತುವಾರಿ ಸಚಿವರಿಗೆ ಪತ್ರ ಬರೆದಿದ್ದಾರೆ.