ಕಾರ್ಮಿಕರಿಗೆ ಗುಡ್ ನ್ಯೂಸ್! ಕಲ್ಯಾಣ ಯೋಜನೆಗಳ ಸಹಾಯ ಧನ ಪರಿಷ್ಕರಣೆ.!

1 min read

ಕಾರ್ಮಿಕ ಕಲ್ಯಾಣ ಯೋಜನೆಗಳ ಸಹಾಯ ಧನ ಪರಿಷ್ಕರಣೆ.
ಸಂಘಟಿತ ಕಾರ್ಮಿಕ ವಲಯಕ್ಕೆ ಹೆಚ್ಚಿನ ಅನುಕೂಲ- ಸಚಿವ ಶಿವರಾಂ ಹೆಬ್ಬಾರ್

  • ನೋಂದಾಯಿತ ಕಾರ್ಮಿಕರ ಏಳು ಕಲ್ಯಾಣ ಯೋಜನೆಗಳ ಮೊತ್ತ ಏರಿಕೆ
  • 41 ಲಕ್ಷಕ್ಕೂ ಅಧಿಕ ಕಾರ್ಮಿಕರಿಗೆ ಪರಿಷ್ಕರಣೆಯಿಂದ ಅನುಕೂಲ
  • ಪರಿಷ್ಕೃತ ದರ 2021-22ನೇ ಸಾಲಿನಿಂದ ಜಾರಿ
  • ಆದಾಯ ಮಿತಿ ಪರಿಷ್ಕರಣೆಯಿಂದ ಹೆಚ್ಚು ಮಂದಿ ತಲುಪಲಿರುವ ಯೋಜನೆ

ಬೆಂಗಳೂರು: ರಾಜ್ಯದ ಕಾರ್ಮಿಕ ವರ್ಗಕ್ಕೆ ಸರ್ಕಾರ ಭರ್ಜರಿ ಉಡುಗೊರೆ ನೀಡಿದ್ದು, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇಲಾಖೆ ಕಲ್ಯಾಣ ಯೋಜನೆಗಳಡಿ ನೀಡಲಾಗುವ ಧನ ಸಹಾಯದಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಲಾಗಿದೆ.
ಕರ್ನಾಟಕ ಕಾರ್ಮಿಕ ಮಂಡಳಿ ಅಧ್ಯಕ್ಷರೂ ಆಗಿರುವ ಸಚಿವ ಶಿವರಾಂ ಹೆಬ್ಬಾರ್ ಅವರ ನೇತೃತ್ವದಲ್ಲಿ ನಡೆದ 90ನೇ ಸಭೆಯ ನಿರ್ಣಯಗಳನ್ನು ಇಲಾಖೆ ಜಾರಿ ಮಾಡಿದ್ದು, ಈ ಮೂಲಕ ಸಹಾಯಧನದಲ್ಲಿ ಭಾರೀ ಪ್ರಮಾಣದ ಏರಿಕೆ ಮಾಡಿ ಆದೇಶಿಸಿದ್ದು, ಈ ಮೂಲಕ ಹೆಚ್ಚಿನ ಕಾರ್ಮಿಕರಿಗೆ ಸವಲತ್ತು ದೊರಕುವಂತೆ ಮಾಡಲಾಗಿದೆ.

ಸಚಿವ ಶಿವರಾಂ ಹೆಬ್ಬಾರ್


ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು ಜಾರಿ ಮಾಡುತ್ತಿರುವ ಈ ಕಲ್ಯಾಣ ಯೋಜನೆಗಳು ಸಂಘಟಿತ ಕಾರ್ಮಿಕರು ಮತ್ತು ಅವರ ಕುಟುಂಬ ವರ್ಗದವರಿಗೆ ಲಭ್ಯವಿದ್ದು, ಈ ಸಹಾಯಧನ ಏರಿಕೆ ನಿರ್ಣಯದಿಂದ ಹೆಚ್ಚಿನ ಅನುಕೂಲ ಆಗಲಿದೆ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ತಿಳಿಸಿದರು.
ಈ ಆದೇಶದಂತೆ ಕಾರ್ಮಿಕ ಕಲ್ಯಾಣ ಮಂಡಳಿ ಸಹಾಯಧನ ಮತ್ತು ಹೆರಿಗೆ ಭತ್ಯೆ ದರಗಳನ್ನು ಪರಿಷ್ಕರಿಸಲಾಗಿದೆ.
ಪ್ರಸ್ತುತ ಜಾರಿಯಲ್ಲಿ ಇರುವ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ ಪಡೆಯಲು ಇದ್ದ ವೇತನ ಮಿತಿ 15,000 ರೂ. ನಿಂದ 21,000 ರೂ. ಏರಿಕೆ ಮಾಡಲಾಗಿದೆ. ಇದರಿಂದ ಈ ಯೋಜನೆ ಇನ್ನಷ್ಟು ಕಾರ್ಮಿಕರನ್ನು ತಲುಪಲಿದೆ. ಈಗಿರುವ ಕಾರ್ಮಿಕ ವೈದ್ಯಕೀಯ ನೆರವು ಮೊತ್ತವನ್ನು 10,000 ರೂ. ನಿಂದ 25,000 ರೂ.ಗಳಿಗೆ ಏರಿಕೆ ಮಾಡಲಾಗಿದೆ. ಕಾರ್ಮಿಕರ ಅಪಘಾತ ಧನ ಸಹಾಯವನ್ನು 3,000 ರೂ. ನಿಂದ 10000 ರೂ.ಗೆ ಏರಿಕೆ ಮಾಡಲಾಗಿದೆ.
ಶೈಕ್ಷಣಿಕ ಪ್ರೋತ್ಸಾಹ ಯೋಜನೆಯಡಿ ಇಲಾಖೆಯು 8ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ, ಡಿಪ್ಲೋಮಾ ಐಟಿಐ ಕೋರ್ಸ್ಗೆ, ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿAಗ್ ಮತ್ತು ವೈದ್ಯÃಯ ಕೋರ್ಸ್ಗಳಿಗೆ ಒಂದು ಕುಟುಂಬ ಓರ್ವ ವಿದ್ಯಾರ್ಥಿಗೆ ವಾರ್ಷಿಕ ಧನ ಸಹಾಯ ನೀಡುವ ಯೋಜನೆಯ ಮಾಸಿಕ ಆದಾಯ ಮಿತಿಯನ್ನು ಏರಿಕೆ ಮಾಡಿ ಹೆಚ್ಚಿನ ಕಾರ್ಮಿಕರಿಗೆ ಅವಕಾಶ ಮಾಡಿಕೊಡಲಾಗಿದೆ.
ಮೃತ ಕಾರ್ಮಿಕನ ಅಂತ್ಯ ಸಂಸ್ಕಾರಕ್ಕಿದ್ದ ಧನ ಸಹಾಯವನ್ನೂ ಏರಿಕೆ ಮಾಡಲಾಗಿದ್ದು, 5,000 ರೂ. ಇದ್ದ ಧನ ಸಹಾಯವನ್ನು ದ್ವಿಗುಣ ಗೊಳಿಸಿ 10,000 ರೂ.ಗೆ ನಿಗಧಿಪಡಿಸಲಾಗಿದೆ.
ವಾರ್ಷಿಕವಾಗಿ ವೈದ್ಯಕೀಯ ತಪಾಸಣಾ ಶಿಬಿರ ಹಮ್ಮಿಕೊಳ್ಳುವ ಟ್ರೇಡ್ ಯೂನಿಯನ್ ಅಥವಾ ಸಂಸ್ಥೆಗಳಿಗೆ ನೀಡಲಾಗುತ್ತಿದ್ದ ಧನ ಸಹಾಯದಲ್ಲಿ ಭಾರೀ ಏರಿಕೆ ಮಾಡಲಾಗಿದ್ದು, ಈ ಧನ ಸಹಾಯವನ್ನು 30000 ರೂ ನಿಂದ 1 ಲಕ್ಷ ರೂ.ಗಳಿಗೆ ಏರಿಕೆ ಮಾಡಲಾಗಿದೆ.
ಸಂಘಟಿತ ಮಹಿಳಾ ಕಾರ್ಮಿಕರಿಗೆ ಮೊದಲ ಎರಡು ಮಕ್ಕಳಿಗೆ ತಲಾ 10,000 ರೂ. ಹೆರಿಗೆ ಭತ್ಯೆ ನೀಡುವಂತಹ ಮಹತ್ವ ನಿರ್ಧಾರವನ್ನೂ ಇಲಾಖೆ ಕೈಗೊಂಡಿದ್ದು, ವಾರ್ಷಿಕ ಕ್ರೀಡಾಕೂಟ ಧನ ಸಹಾಯವನ್ನು 50000 ರೂ. ನಿಂದ 1 ಲಕ್ಷಕ್ಕೆ ಏರಿಕೆ ಮಾಡಲಾಗಿದೆ.
ಈ ಯೋಜನೆಗಳ ಜಾರಿಯನ್ನು ಸರ್ಕಾರದ ಯಾವುದೇ ಅನುದಾನ ಬಳಕೆ ಇಲ್ಲದೆ ಕಾರ್ಮಿಕ ಕಲ್ಯಾಣ ಮಂಡಳಿ ಸಂಪನ್ಮೂಲದಿAದಲೇ ಭರಿಸಲಾಗುವುದು ಎಂದು ತಿಳಿಸಿರುವ ಸಚಿವ ಶಿವರಾಂ ಹೆಬ್ಬಾರ್, ಈ ಸಹಾಯಧನ ಪರಿಷ್ಕರಣೆಯಿಂದ ಸಂಘಟಿತ ಕಾರ್ಮಿಕ ವಲಯಕ್ಕೆ ಹೆಚ್ಚಿನ ಅನುಕೂಲ ಆಗಲಿ ಎಂಬುದೇ ಸರ್ಕಾರದ ಉದ್ದೇಶ ಎಂದು ಹರ್ಷ ವ್ಯಕ್ತಪಡಿಸಿದರು.

“ಕಾರ್ಮಿಕ ಕಲ್ಯಾಣ ಯೋಜನೆಗಳ ದರ ಪರಿಷ್ಕರಣೆ ಕಾರ್ಮಿಕ ಸಂಘಟನೆಗಳ ಬಹು ದಿನಗಳ ಬೇಡಿಕೆಯಾಗಿತ್ತು ಮತ್ತು ಕಳೆದ ಐದಾರು ವರ್ಷಗಳಿಂದ ದರ ಪರಿಷ್ಕರಣೆ ಕಾರ್ಯ ನಡೆದಿರಲಿಲ್ಲ. ಹೀಗಾಗಿ ಸಂಕಷ್ಟ ಸಂದರ್ಭ ಮತ್ತು ಬೆಲೆಗಳಲ್ಲಿ ಆಗಿರುವ ಏರುಪೇರುಗಳನ್ನು ಪರಿಗಣಿಸಿ ಕಾರ್ಮಿಕ ಹಿತವನ್ನೇ ಪ್ರಮುಖ ಗುರಿಯಾಗಿಸಿಕೊಂಡು ದರ ಪರಿಷ್ಕರಣೆ ಮಾಡಲಾಗಿದೆ. ಹೆಚ್ಚಿನ ಕಾರ್ಮಿಕರು ಈ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂಬುದೇ ಸರ್ಕಾರದ ಉದ್ದೇಶ”
-ಶಿವರಾಂ ಹೆಬ್ಬಾರ್
ಕಾರ್ಮಿಕರ ಸಚಿವರು

About Author

Leave a Reply

Your email address will not be published. Required fields are marked *