ಮೈಸೂರಿನಿಂದ ನಿರ್ಗಮಿಸಿದ್ರು ರೋಹಿಣಿ ಸಿಂಧೂರಿಗೆ ಸಂಕಷ್ಟ!
1 min read
ಮೈಸೂರು ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮೈಸೂರು ಜಿಲ್ಲಾಧಿಕಾರಿ ಅಧಿಕೃತ ಸರ್ಕಾರಿ ನಿವಾಸದ ನವೀಕರಣ ವಿಚಾರದಲ್ಲಿ ತನಿಖೆಗೆ ಆದೇಶ ನೀಡಲಾಗಿದೆ. ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಿಂದ ಪ್ರಾದೇಶಿಕ ಆಯುಕ್ತರಿಗೆ ತನಿಖೆಗೆ ಆದೇಶ ನೀಡಿದ್ದು, ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮತಿ ಇಲ್ಲದೆ ಕಟ್ಟಡ ನವೀಕರಿಸಿ ನಿವಾಸದ ನೆಲ ಹಾಸಿಗೆಯ ನವೀಕರಣ ಮಾಡಲಾಗಿತ್ತು.

ಈ ಬಗ್ಗೆ ಶಾಸಕ ಸಾರಾ ಮಹೇಶ್ ನೀಡಿದ್ದ ದೂರು ಆಧರಿಸಿ ಈ ಬಗ್ಗೆ ತನಿಖೆ ನಡೆಸಿ 7 ದಿನಗಳ ಒಳಗೆ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಪ್ರಧಾನ ಕಾರ್ಯದರ್ಶಿಯಿಂದ ಮೈಸೂರು ಪ್ರಾದೇಶಿಕ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ. ಈ ಮೂಲಕ ರೋಹಿಣಿ ಸಿಂಧೂರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ
