ನಾಳೆ ಬೆಳಗ್ಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಚಾರಿ ವಿಜಯ್ ಅಂತಿಮ ದರ್ಶನದ ವ್ಯವಸ್ಥೆ!
1 min readಬೆಂಗಳೂರು : ನಟ ಸಂಚಾರಿ ವಿಜಯ್ ಅವರ ಬ್ರೈನ್ ಡೆಡ್ ಆಗಿದ್ದು ಅವರ ಅಂಗಾಂಗ ಕಸಿ ಮಾಡುವ ಪ್ರಕ್ರಿಯೆ ಶುರುವಾಗಿದೆ. ಈ ಕಾರಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ನಾಳೆ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಏರ್ಪಡಿಸಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ 10 ಗಂಟೆಯವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಬಳಿಕ ಅವರ ಹುಟ್ಟೂರಾದ ಚಿಕ್ಕಮಗಳೂರಿನ ಕಡೂರಿನ ಪಂಚನಹಳ್ಳಿಯಲ್ಲಿ ಸಂಜೆ ಅಂತಿಮ ವಿಧಿವಿಧಾನಗಳನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯ ಸಂಸ್ಕಾರ ನಡೆಸಲಾಗುವುದು ಎಂದು ಆಪ್ತ ಸ್ನೇಹಿತನು ಆಗಿರುವ ನಿರ್ದೇಶಕ ಮನ್ಸೂರೆ ತಿಳಿಸಿದ್ದಾರೆ.