ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್’ಗೆ ಅಪಘಾತ: ಸ್ಥಿತಿ ಗಂಭೀರ
1 min readಬೆಂಗಳೂರು: ಭೀಕರ ರಸ್ತೆ ಅಪಘಾತ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್ ಅಪಘಾತ. ಬೈಕ್‌ನಲ್ಲಿ ಸ್ನೇಹಿತರ ಜೊತೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಸದ್ಯ ಸಂಚಾರಿ ವಿಜಯ್ ಅವರನ್ನ ಬೆಂಗಳೂರಿನ ಬನ್ನೇರುಘಟ್ಟದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೆದುಳಿನ ಭಾಗದಲ್ಲಿ ತೀವ್ರ ರಕ್ತಸ್ರಾವ ಹಾಗೂ ಬಲ ತೊಡೆಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಸಂಚಾರಿ ವಿಜಯ್ ಅವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ.
ಸಂಚಾರಿ ವಿಜಯ್ ನಾನು ಅವಳಲ್ಲ ಸಿನಿಮಾ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದರು. ನಾತಿಚರಾಮಿ, ಜಂಟಲ್‍ಮೆನ್, ಆಕ್ಟ್ 1978, ಕೃಷ್ಣ ತುಳಸಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.