ಮೈಸೂರಿನಲ್ಲಿ ಸಂಗೊಳ್ಳಿರಾಯಣ್ಣ ಜನ್ಮ ದಿನಾಚರಣೆ!
1 min readಮೈಸೂರು : ರಾಣಿ ಚೆನ್ನಮ್ಮಳ ಬಲಗೈ ಬಂಟ, ಬ್ರಿಟಿಷರಿಗೆ ಸಿಂಹಸ್ವಪ್ನವಾಗಿ ಕೆಚ್ಚೆದೆಯಿಂದ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜನ್ಮ ದಿನಾಚರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಸಹಕಾರ ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಪುಷ್ಟಾರ್ಚನೆ ಸಲ್ಲಿಸಿ ಗೌರವ ಅರ್ಪಿಸಿದರು.
ಮೈಸೂರಿನ ಕಲಾಮಂದಿರದ ಕಿರುರಂಗಮಂದಿರದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣರ ಜನ್ಮ ದಿನಾಚರಣೆಯನ್ನು ಸಚಿವರು ಹಾಗೂ ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕರಾದ ಎಲ್. ನಾಗೇಂದ್ರ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್ ಮಂಜುನಾಥಸ್ವಾಮಿ, ಜಿಲ್ಲಾ ಪಂಚಾಯತ್ ಸಿ.ಇ.ಒ ಎಂ.ಎ ಯೋಗೀಶ್, ಪೊಲೀಸ್ ವರಿಷ್ಠಾಧಿಕಾರಿ ಆರ್. ಚೇತನ್, ಡಿಸಿಪಿ ಪ್ರದೀಪ್ ಗುಂಟಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಮುಡಾ ಆಯುಕ್ತ ಡಾ.ಡಿ.ಬಿ. ನಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎಚ್. ಚೆನ್ನಪ್ಪ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರಾದ ಆರ್. ರಾಜು, ತಹಶೀಲ್ದಾರ್ ರಕ್ಷಿತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.