ಪರಿಶಿಷ್ಟ ಜಾತಿ/ ಪಂಗಡಕ್ಕೆ ಸೇರಿದ ಮಹಿಳೆಯರನ್ನು ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿ- CM ಬೊಮ್ಮಾಯಿ!

1 min read

ಬೆಂಗಳೂರು : ಪರಿಶಿಷ್ಟ ಜಾತಿ/ ಪಂಗಡಕ್ಕೆ ಸೇರಿದ ಮಹಿಳೆಯರನ್ನು ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು.

-ಇಂದು ಟಾಟಾ ಸ್ಟೀಲ್ ಸಂಸ್ಥೆಯ ಮಾಜಿ ಉಪಾಧ್ಯಕ್ಷ ಹಾಗೂ ನಡ್ಜ್ ಪ್ರತಿಷ್ಠಾನದ ಸದಸ್ಯರಾದ ಬಿ.ಮುತ್ತುರಾಮನ್ ಅವರ ನೇತೃತ್ವದ ನಿಯೋಗದೊಂದಿಗೆ ಅವರು ಇಂದು ಮಾತನಾಡುತ್ತಿದ್ದರು.

ಅತಿ ಹೆಚ್ಚು ತಲಾ ಆದಾಯ ಹೊಂದಿರುವ ಐದು ರಾಜ್ಯಗಳ ಪೈಕಿ ಕರ್ನಾಟಕವೂ ಒಂದು. ಈ ಕೊಡುಗೆ ನೀಡುವುದು ಶೇ.30 ರಷ್ಟು ಮಹಿಳೆಯರು ಪರಿಶಿಷ್ಟ ಸಮುದಾಯದವರಾಗಿದ್ದು, ಕೌಶಲ್ಯವನ್ನು ಹೊಂದಿದವರಾಗಿದ್ದಾರೆ ಎಂದರು.
-ರಾಜ್ಯದಲ್ಲಿರುವ 7500 ಸ್ವಸಹಾಯ ಗುಂಪುಗಳನ್ನು ಆರ್ಥಿಕ ಚಟುವಟಿಕೆಗಲ್ಲಿ ತೊಡಗಿಸಬೇಕು ಎಂದು ತಿಳಿಸಿದರು.

-ನಡ್ಜ್ ಪ್ರತಿಷ್ಠಾನದ ಸಿ.ಇ.ಒಅತುಲ್ ಸತೀಜಾ ಮಾತನಾಡಿ, ಬಡತನವನ್ನು ನಿವಾರಿಸುವ ಉದ್ದೇಶದಿಂದ ನಡ್ಜ್ ಸಂಸ್ಥೆಯನ್ನು ಸ್ಥಾಪಿಸಲಾಗಿದ್ದು, ಕರ್ನಾಟಕವೂ ಸೇರಿದಂತೆ ಭಾರತದಾದ್ಯಂತ ಬಡತನ ನಿವಾರಣೆ ಮತ್ತು ಜೀವನೋಪಾಯದ ಮೂಲಕ ದೊಡ್ಡ ಪ್ರಮಾಣದ ಸಾಮಾಜಿಕ ಪರಿವರ್ತನೆ ತರುವುದಾಗಿದೆ ಎಂದರು.

ಕಳೆದ 6 ವರ್ಷಗಳಲ್ಲಿ, ಕೌಶಲ್ಯ ಅಭಿವೃದ್ಧಿ, ಸಾಮಾಜಿಕ ಉದ್ಯಮಶೀಲತೆ ಮತ್ತು ಗ್ರಾಮೀಣ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರಲ್ಲದೆ,

ನಡ್ಜ್‌ ಸಂಸ್ಥೆಯನ್ನು ಬೆಂಗಳೂರಿನಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಕೌಶಲ್ಯಾಭಿವೃದ್ಧಿಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸಲು ಉತ್ಸುಕವಾಗಿರುವುದಾಗಿ ತಿಳಿಸಿದರು.

ನಡ್ಜ್ ಪ್ರತಿಷ್ಠಾನದ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ವಿನೋದ್ , ಸಿ.ಇ.ಒ ಅತುಲ್ ಸತೀಜಾ, ಸುಧಾ ಶ್ರೀನಿವಾಸನ್, ಯೋಜನಾ ಹಾಗೂ ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *