ಕನ್ನಡದ ಹಿರಿಯ ನಟ ರಾಜೇಶ್ ಇನ್ನಿಲ್ಲ!

1 min read

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಮೇರು ನಟ ರಾಜೇಶ್ (86) ಅವರು ವಿಧಿವಶರಾಗಿದ್ದಾರೆ.
ತೀವ್ರ ಅನಾರೋಗ್ಯ ಹಿನ್ನಲೆ ಕಿಡ್ನಿ ವೈಫಲ್ಯ, ವಯೋಸಹಜ ಕಾಯಿಲೆ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ನಟ ರಾಜೇಶ್ ಅವರನ್ನ ಫೆ.9ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಮಟ್ಟಿದ್ದಾರೆ.


ಅಲ್ಲದೆ ಹಲವು ದಶಕಗಳಿಂದ ಚಿತ್ರರಂಗದಲ್ಲಿ ಹಿರಿಯ ನಟರಾಗಿದ್ದ ರಾಜೇಶ್ ಅವರು ಸೊಸೆ ತಂದ ಸೌಭಾಗ್ಯ, ದೇವರ ಗುಡಿ, ವೀರ ಸಂಕಲ್ಪ ಸೇರಿದಂತೆ 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದು, ಇತ್ತೀಚಿನ ವರ್ಷಗಳಲ್ಲಿ ನಟನೆಯಿಂದ ದೂರ ಉಳಿದುಕೊಂಡಿದ್ದರು. ಇನ್ನು ಹಿರಿಯ ನಟ ಮೃತ ರಾಜೇಶ್ ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು ಅದರಲ್ಲಿ ನಟಿ ಆಶಾರಾಣಿ, ನಟ ಅರ್ಜುನ್ ಸರ್ಜಾ ಅವರನ್ನು ಮದುವೆಯಾಗಿದ್ದಾರೆ. ರಾಜೇಶ್ ಅವರ ನಿಧನಕ್ಕೆ ಇಡೀ ಚಿತ್ರರಂಗ ಕಂಬನಿ ಮಿಡಿದಿದೆ.

About Author

Leave a Reply

Your email address will not be published. Required fields are marked *