ಸ್ವಾಮಿ ವಿವೇಕಾನಂದರ ಆದರ್ಶ ಯುವಜನತೆಗೆ ತಲುಪಬೇಕು: ಹೇಮಂತ್ ಕುಮಾರ್ ಗೌಡ
1 min readಮೈಸೂರು,ಜ.12-ಯುವ ಮನಸ್ಸುಗಳ ಪ್ರೇರಣಾ ಶಕ್ತಿ, ಭಾರತೀಯ ಧಾರ್ಮಿಕ ಪರಂಪರೆ ಸಾಕ್ಷಿಪ್ರಜ್ಞೆಯಂತಿದ್ದ ಸ್ವಾಮಿ ವಿವೇಕಾನಂದರ ಆದರ್ಶ ಯುವಜನತೆಗೆ ತಲುಪಬೇಕು ಎಂದು ವಸ್ತುಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ ತಿಳಿಸಿದರು.
ವಸ್ತುಪ್ರದರ್ಶನ ಪ್ರಾಧಿಕಾರದ ವತಿಯಿಂದ ವಸ್ತುಪ್ರದರ್ಶನ ಆವರಣದಲ್ಲಿ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮದಲ್ಲಿ ವಿವೇಕಾನಂದರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಿಹಿ ವಿತರಿಸಲಾಯಿತು.
ವಿವೇಕಾನಂದರು ವಿದೇಶಗಳಲ್ಲೂ ಸನಾತನ ಧಾರ್ಮಿಕ ಭಾರತೀಯತೆಯನ್ನು ಪರಿಚಯಿಸಿದರು. ಯುವಜನರಲ್ಲಿ ಶೌರ್ಯ, ಧೈರ್ಯ ತುಂಬಿದರು. ಇಂತಹ ಮಹಾನ್ ವ್ಯಕ್ತಿಯ ಬಗ್ಗೆ ಯುವಜನತೆಗೆ ತಿಳಿಸಿಕೊಡುವ ಕೆಲಸ ಮಾಡಬೇಕಿದೆ ಎಂದರು.
ಈ ಸಂದರ್ಭದಲ್ಲಿ ಹಿರಿಯ ಸಮಾಜ ಸೇವಕ ಕೆ.ರಘುರಾಂ ವಾಜಪೇಯಿ, ವಸ್ತುಪ್ರದರ್ಶನ ಪ್ರಾಧಿಕಾರದ ಕಾರ್ಯ ನಿರ್ವಾಹಕ ಅಧಿಕಾರಿ ಗಿರೀಶ್, AEE ಯಾದಗಿರಿ, ಜೀವಧಾರ ರಕ್ತನಿಧಿ ಕೇಂದ್ರದಲ್ಲಿ ನಿರ್ದೇಶಕ ಗಿರೀಶ್, ಪರಿಸರ ಸ್ನೇಹಿ ಬಳಗದ ಅಧ್ಯಕ್ಷ ಲೋಹಿತ್, ಪೃಥ್ವಿ ಸಿಂಗ್ ಚಂದವತ್, ಮಹೇಂದ್ರ ಎಂ.ಶೈವಾ, ಸೂರಜ್, ಸದಾನಂದ, ಸುಚೀಂದ್ರ ಇನ್ನಿತರರು ಹಾಜರಿದ್ದರು.