ಅತಿಥಿ ಉಪನ್ಯಾಸಕರಿಗೆ ಶೀಘ್ರವೇ ಸಿಹಿ ಸುದ್ದಿ!
1 min readಬೆಂಗಳೂರು,ಜ.12- ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಶೀಘ್ರವೇ ಸಿಹಿ ಸುದ್ದಿ ನೀಡಲಿದೆ. ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಯನ್ನು ಬಗೆಹರಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ರಾಜ್ಯದಲ್ಲಿರುವ 14 ಸಾವಿರ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಸಾಕಷ್ಟು ಚರ್ಚಿಸಿದ್ದು, ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಿದೆ. ಒಂದೆರಡು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ.
ಇಂದು ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಕಚೇರಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ತಮ್ಮ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದೆ. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಈ ಮಾಹಿತಿ ನೀಡಿದ್ದಾರೆ.
ಜೊತೆಗೆ ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು, ಬೋಧನೆಗೆ ಹಿಂದಿರುಗಬೇಕು ಎಂದು ಮನವಿಯನ್ನು ಮಾಡಿಕೊಂಡಿದ್ದಾರೆ.
ಸಭೆಯಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ತಿನ ಹಲವು ಸದಸ್ಯರೊಂದಿಗೆ ವಿಷಯ ಚರ್ಚಿಸಲಾಗಿದೆ. ಅಲ್ಲದೆ, ಅತಿಥಿ ಉಪನ್ಯಾಸಕರ ಸಂಘಗಳ ಪರವಾಗಿ ಸಲ್ಲಿಸಿದ ಅಹವಾಲುಗಳನ್ನು ಕೂಡ ಪರಿಶೀಲಿಸಲಾಗಿದೆ.