ಮೈಸೂರಲ್ಲಿ ಗ್ಯಾಂಗ್ ರೇಪ್ ಪ್ರಕರಣ- ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆದ ಸಚಿವ ಸೋಮಶೇಖರ್
1 min readಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ವಿಚಾರವಾಗಿ ಪೊಲೀಸ್ ಅಧಿಕಾರಿಗಳ ಜೊತೆ ಜಿಲ್ಲಾ ಉಸ್ತುವಾರಿ ಸಚಿವರು ಸಭೆ ನಡೆಸಿದ್ದಾರೆ. ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಸಭೆ ನಡೆದಿದ್ದು, ಅತಿಥಿ ಗೃಹಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ. ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಪೊಲೀಸ್ ಹಿರಿಯ ಅಧಿಕಾರಿಗಳ ಉಪಸ್ಥಿತರಿದ್ದಾರೆ.
ಈ ವೇಳೆ ಮಾತನಾಡಿದ ಸಚಿವರು, ಘಟನೆ ಬಗ್ಗೆ ಬಹಳ ಕಟ್ಟುನಿಟ್ಟಿನ ಕ್ರಮ ವಹಿಸಲು ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದು, ಬೀಟ್ ವ್ಯವಸ್ಥೆ ಮತ್ತಷ್ಟು ಹೆಚ್ಚಾಗಲಿದೆ ಎಂದಿದ್ದಾರೆ. ಅಲ್ಲದೆ ಪ್ರಕರಣ ಬಹಳ ಗಂಭೀರವಾಗಿದ್ದು, ಸಿಎಂ ಹಾಗೂ ಗೃಹ ಸಚಿವರಿಗೆ ಈ ಬಗ್ಗೆ ಮಾಹಿತಿ ನೀಡುವುದಾಗಿಯು ತಿಳಿಸಿದರು.