ನಮ್ಮ ಮೈಸೂರಿನ ಇಬ್ಬರು ರಾಜ್ಯದ ಬೆಸ್ಟ್ ಶಿಕ್ಷಕರು!
1 min read•ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ
•ಮೈಸೂರು ಜಿಲ್ಲೆಯ ಕೆ. ಸಂಗೀತಾ, ಮಹಾದೇವ ಆಯ್ಕೆ.
ಮೈಸೂರು : ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಶಿಕ್ಷಕರ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿ ಅಧಿಸೂಚನೆ ಹೊರಡಿಸಿದೆ.
ಈ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಹೆಚ್.ಡಿ.ಕೋಟೆ ತಾಲ್ಲೂಕಿನ ಜಿ.ಬಿ.ಸರಗೂರಿನ ಸರ್ಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕರಾದ ಕೆ.ಸಂಗೀತಾ, ಮೈಸೂರು ತಾಲ್ಲೂಕಿನ ಎಂ.ಸಿ.ಹುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಮಹಾದೇವ ಅವರು ಆಯ್ಕೆಯಾಗಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ರಾಮಚಂದ್ರ ರಾಜೇ ಅರಸ್ ಅವರು ಈ ಮಾಹಿತಿ ತಿಳಿಸಿದ್ದಾರೆ.