ಆಶಾ ಕಾರ್ಯಕರ್ತೆಯರಿಗೆ ಆಹಾರ, ಮೆಡಿಕಲ್ ಕಿಟ್ ವಿತರಿಸಿ ಮಾನವೀಯತೆ ಮೆರೆದ ಸುಜೀವ್ ಸಂಸ್ಥೆ

1 min read

ಮೈಸೂರು: ಇಂದು ಸುಜೀವ್ ಫೌಂಡೇಶನ್ ಮತ್ತು ಮೈಸೂರು ನಗರ ಕಾಂಗ್ರೆಸ್ ಚಾಮುಂಡೇಶ್ವರಿ ಕ್ಷೇತ್ರದ ಜನರಿಗೆ Medicine ಔಷಧಿ ಕಿಟ್‌ಗಳನ್ನು ನೀಡುವ ಕೆಲಸವನ್ನು ಪ್ರಾರಂಭಿಸಿತು. ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್‌ಗಳನ್ನು ವಿತರಿಸಲಾಯಿತು.

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಬೀರಿಹುಂಡಿ ಗ್ರಾಮದಲಿ ಮೆಡಿಕಲ್ ಕಿಟ್ ವಿತರಣೆ ಮಾಡಿದರು. ಮೈಸೂರು ನಗರ ಕಾಂಗ್ರೆಸ್ ಉಪಾಧ್ಯಕ್ಷ ರಾಜಾರಾಮ್ ಅವರು ಉಚಿತ ಹೋಮ್ ಐಸೊಲೇಷನ್ ಮೆಡಿಕಲ್ ಕಿಟ್ ವಿತರಣೆ ಮಾಡಿದರು ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಪ್ರಕಾಶ್ ರವರು ಆಹಾರ ಕಿಟ್ ವಿತರಣೆ ಮಾಡಿದರು.

ಲಾಕ್ ಡೌನ್ ಹಿನ್ನೆಲೆ ಆಶಾ ಕಾರ್ಯಕರ್ತರು, ಅಂಗನವಾಡಿ ಶಿಕ್ಷಕರು ಹಾಗೂ ಪೌರಕಾರ್ಮಿಕರಿಗೆ ಮೆಡಿಕಲ್ ಕಿಟ್ ಹಾಗೂ ಆಹಾರ ಕಿಟ್ ವಿತರಿಸಿದರು .

ಕೆಪಿಸಿಸಿ ಉಪಾಧ್ಯಕ್ಷರಾದ ಧ್ರುವನಾರಾಯಣ್ ರವರು ಮಾತನಾಡಿ ಸುಜೀವ್ ಸಂಸ್ಥೆಯ ಅದ್ಯಕ್ಷರಾದ ರಾಜರಾಮ್ ಹಾಗೂ ಜಿಲ್ಲಾ ಪಂಚಾಯ್ತಿ ಸದಸ್ಯರಾದ ಪ್ರಕಾಶ್ ಹಾಗೂ ಇನ್ನಿತರ ಮುಖಂಡರ ಜತೆಗೂಡಿ ಈ ಕಾರ್ಯಕ್ರಮವನ್ನು ಮಾಡಲಾಗಿದೆ. ಕಳೆದ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಈ ಬಾರಿಯೂ ಸಹ ಅದೇ ಅನೇಕ ಕಾರ್ಯಕ್ರಮವನ್ನು ಮಾಡುತ್ತೇವೆ .

ನಂತರ ಸುದ್ದಿಗಾರೊಂದಿಗೆ ಅಧ್ಯಕ್ಷರಾದ ರಾಜಾರಾಮ ಅವರು ಮಾತನಾಡಿ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮೆಡಿಕಲ್ ಕಿಟ್ ಹಾಗೂ ಆಶಾ ಕಾರ್ಯಕರ್ತೆಯರಿಗೆ ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ಆಹಾರ ಕಿಟ್ ಗಳನ್ನು ವಿತರಿಸಿದರು. ಇದೇ ರೀತಿ ಮುಂದೆಯೂ ಸಹ ಅನೇಕ ಕಾರ್ಯಕ್ರಮಗಳನ್ನು ಮೈಸೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಹಮ್ಮಿಕೊಳ್ಳುತ್ತೇವೆ ಎಂದು ಹೇಳಿದರು .

ಇದೇ ವೇಳೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯದರ್ಶಿಯಾದ ಧ್ರುವನಾರಾಯಣ್ ಮೈಸೂರು ಗ್ರಾಮಾಂತರ ಅಧ್ಯಕ್ಷರಾದರು ವಿಜಯಕುಮಾರ್ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಪ್ರಕಾಶ್ ಗೌಡ ,ಗ್ರಾಮ ಪಂಚಾಯಿತಿ ಅಧ್ಯಕ್ಷ ನರೇಂದ್ರ ಕಾಂಗ್ರೆಸ್ ಯುವ ಮುಖಂಡ ಸುನೀಲ್ ಬೋಸ್ ಹಾಗೂ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *