ಎಲ್ಲರನ್ನೂ ಕರೆದುಕೊಂಡು ಬಂದಿದ್ದು ಟ್ರಿಮೆಂಡಸ್ ಜಾಬ್- ಸಂಸದೆ ಸುಮಲತಾ!

1 min read

ಮೈಸೂರಿನ ರೈಲ್ವೇ ಅಧಿಕಾರಿಗಳ ಜೊತೆ ಮಂಡ್ಯ ಸಂಸದೆ ಸುಮಲತಾ ಸಭೆ ನಡೆಸಿದ್ದಾರೆ. ಮೈಸೂರು ರೈಲ್ವೇ ಡಿ ಆರ್ ಎಂ ಕಚೇರಿಯಲ್ಲಿ ಸಭೆ ನಡೆಸಿದ ಸಂಸದೆ, ಪಾಂಡವಪುರ ಹಾಗೂ ಶ್ರೀರಂಗಪಟ್ಟಣದಲ್ಲಿ ರೈಲು ನಿಲುಗಡೆ ವಿಚಾರವಾಗಿ ಡಿಆರ್‌ಎಂ ರಾಹುಲ್ ಅಗ್ರವಾಲ್, ಸೀನಿಯರ್ ಡಿವಿಜನಲ್ ಇಂಜಿನಿಯರ್ ರವಿಚಂದ್ರನ್ ರೈಲ್ವೇ ಅಧಿಕಾರಿ ಮಂಜುನಾಥ್ ಸೇರಿ ಹಲವು ಅಧಿಕಾರಿಗಳೊಟ್ಟಿಗೆ ಸಭೆ ನಡೆಸಿದರು.

ಇದಕ್ಕು ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಂಡ್ಯದಲ್ಲಿ ಕೆಲಸಕ್ಕಿಂತ ಕ್ರೆಡಿಟ್‌ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ನಾನು ಮಾಡಿರುವುದನ್ನು ಇಲ್ಲ ಅಂದಾಗ ಸುಮ್ಮನಿರಲು ಸಾಧ್ಯವಿಲ್ಲ ಎಂದರು. ಜನ ವಿಶ್ವಾಸ ಇಟ್ಟು ನನ್ನನ್ನು ಆಯ್ಕೆ ಮಾಡಿದ್ದಾರೆ. ಕ್ರೆಡಿಟ್ ತೆಗೆದುಕೊಳ್ಳಲು ನಾನು ಮಾಡಲ್ಲ. ನಿಜ ಹೇಳಲು ಭಯ ಏಕೆ ? ಕ್ರೆಡಿಟ್ ವಾರ್ ಯಾರು ಆರಂಭಿಸುತ್ತಾರೋ ಅವರು ಅವರ ಜವಾಬ್ದಾರಿ ಬಗ್ಗೆ ನೋಡಿಕೊಳ್ಳಬೇಕು. ಸಂಸದರ ಕ್ರೆಡಿಟ್ ಪಡೆಯುವುದಕ್ಕೆ ಏಕೆ ಬರುತ್ತಿದ್ದಾರೋ ಗೊತ್ತಿಲ್ಲ. ಶಿಂಷಾ ಸೇತುವೆ ವಿಚಾರ ನಾನು ಪ್ರತಿಭಟನಾ ಸ್ಥಳಕ್ಕೆ ಹೋಗಿದ್ದೇನೆ. ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದೇನೆ. ನಾಲ್ಕು ಬಾರಿ ಅವರನ್ನು ಭೇಟಿ ಮಾಡಿದ್ದೇನೆ. ಆಯಾ ಕ್ಷೇತ್ರದ ಸಂಸದ ಆಯಾ ಕ್ಷೇತ್ರದ ಬಗ್ಗೆ ಕೇಳಿದರೆ ಪ್ರತಿಕ್ರಿಯೆ ಸಿಗುತ್ತದೆ. ಯಾರು ಬೇಕಾದರೂ ಪತ್ರ ಬರೆದಿರಬಹುದು. ಮಾಜಿ ಪ್ರಧಾನಿ ಅಥವಾ ಬೇರೆಯವರು ಬರೆದಿರಬಹುದು. ಅವರು ಏನು ಬರೆದಿದ್ದಾರೆ ಅನ್ನೋದು ನನಗೆ ಗೊತ್ತಿಲ್ಲ. ನನ್ನ ಕ್ಷೇತ್ರದ ವಿಚಾರವಾಗಿ ನಾನು ಕೆಲಸ ಮಾಡುತ್ತೇನೆ. ನಾನು ಮಾಡಿದ ಕೆಲಸ ಮಾಡಿಲ್ಲ ಅಂತಾ ಹೇಳಿದರೆ ನಾನು ಸುಮ್ಮನಿರಲ್ಲ. ಟಾರ್ಗೆಟ್ ಮಾಡುವುದು ಮೊದಲ ದಿನದಿಂದಲೂ ನಡೆದಿದೆ. ನನ್ನ ಜಿಲ್ಲೆಗೆ ಸಂಬಂಧಪಟ್ಟ ವಿಚಾರ ಮಾತ್ರ ನಾನು ಮಾತನಾಡುತ್ತೇನೆ. ನಾನು ಏನೇ ಮಾಡಿದರು ವಿರೋಧ ಮಾಡಬೇಕೆಂದು ಅವರು ನಿರ್ಧರಿಸಿದ್ದಾರೆ. ಎಲ್ಲದರಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ನಾನು ಕೆಲಸ ಮಾಡುತ್ತೇನೆ. ಜನ ನನ್ನ ಪರ ಮಾತನಾಡುತ್ತಾರೆ ಅನ್ನೋ ಭಯ ಇದೆ ಎಂದರು.

ಕೇಂದ್ರ ಸರ್ಕಾರದ ಏರ್‌ಲಿಫ್ಟ್‌ಗೆ ಬೆಂಬಲ!

ರಷ್ಯಾ ಉಕ್ರೇನ್ ಯುದ್ದ ವಿಚಾರ. ಅಲ್ಲಿನ ಪರಿಸ್ಥಿತಿ ಅರ್ಥ ಮಾಡಿಕೊಂಡ ಮಾತನಾಡಬೇಕು. ವಿದೇಶಾಂಗ ಇಲಾಖೆ ಯಾವ ರೀತಿ ಕೆಲಸ ಮಾಡುತ್ತದೆ ಅನ್ನೋದು ಗೊತ್ತಿದೆ. ಕೇಂದ್ರ ಖಂಡಿತಾ ಪ್ರಾಮಾಣಿಕ‌ವಾದ ಪ್ರಯತ್ನ ಮಾಡಿದೆ. ಬಹುತೇಕ ಎಲ್ಲವನ್ನೂ ಸುರಕ್ಷಿತವಾಗಿ ಕರೆ ತರಲಾಗಿದೆ.
ಪ್ರತಿ ವಿಷಯವನ್ನು ರಾಜಕೀಯ ಮಾಡಬಾರದು. ಅಲ್ಲಿ ಯುದ್ದ ನಡೆಯುತ್ತಿದೆ. ಅಲ್ಲಿಂದ ಕರೆದುಕೊಂಡು ಬರುವುದು ಸುಲಭದ ಪರಿಸ್ಥಿತಿ ಆಗಿರಲಿಲ್ಲ. ಇಲ್ಲಿ ಬಟನ್ ಒತ್ತಿದರೆ ಅಲ್ಲಿ ವಿಮಾ‌ನ ಇಳಿಸಲು ಸಾಧ್ಯವಿಲ್ಲ. ಎಲ್ಲರನ್ನೂ ಕರೆದುಕೊಂಡು ಬಂದಿದ್ದು ಟ್ರಿಮೆಂಡಸ್ ಜಾಬ್. ಕೇಂದ್ರಕ್ಕೆ ಪುಲ್ ಸಂಸದೆ ಸುಮಲತಾ ಫುಲ್ ಕ್ರೆಡಿಟ್ ನೀಡಿದ್ದಾರೆ.

ಚಿತ್ರರಂಗ ಮಿಸ್ ಮಾಡಿಕೊಳ್ತಿದ್ದೇನೆ!

ರಾಜಕೀಯ ಒತ್ತಡದಲ್ಲಿ ಸಿನಿಮಾರಂಗವನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಆದರೂ ಒತ್ತಡದ ನಡುವೆಯೂ ಈ ವರ್ಷ ಒಂದು ಸಿನಿಮಾದಲ್ಲಿ ನಟನೆ ಮಾಡುತ್ತೇನೆ. ಚಿತ್ರರಂಗ ನನ್ನ ಕುಟುಂಬ ಇದ್ದಂತೆ. ಚಿತ್ರರಂಗ ನನಗೆ ಎಲ್ಲವನ್ನೂ‌ ನೀಡಿದೆ. ಅಲ್ಲಿ ಉತ್ತಮ ನೆನಪುಗಳಿವೆ. ಯಾವತ್ತು ನಾನು ಚಿತ್ರರಂಗದ ಜೊತೆ ಇರುತ್ತೇನೆಂದು ಎಂದರು.

About Author

Leave a Reply

Your email address will not be published. Required fields are marked *