September 8, 2024

ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್‍ಚಂದ್ ಗೆಹ್ಲೋಟ್ ಪ್ರಮಾಣ ವಚನ

1 min read

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್‍ಚಂದ್ ಗೆಹ್ಲೋಟ್ ಅವರು ಇಲ್ಲಿ ಇಂದು ಪ್ರಮಾಣ ವಚನ ಸ್ವಿಕರಿಸಿದರು.

ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ರಾಜಭವನದ ಗಾಜಿನ ಮನೆಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಥಾವರ್‍ಚಂದ್ ಗೆಹ್ಲೋಟ್ ಅವರಿಗೆ ಪ್ರಮಾಣ ವಚನವನ್ನು ಬೋಧಿಸಿದರು. ನೂತನ ರಾಜ್ಯಪಾಲರು ಹಿಂದಿ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನ ಸ್ವೀಕಾದ ಸಮಾರಂಭದಲ್ಲಿ ನಿರ್ಗಮಿತ ರಾಜ್ಯಪಾಲ ವಜುಭಾಯಿ ರುಢಾಭಾಯಿ ವಾಲಾ ಹಾಗೂ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಅಲಂಕೃತ ವೇದಿಕೆಯಲ್ಲಿ ನೂತನ ರಾಜ್ಯಪಾಲರ ಜೊತೆಗೆ ವೇದಿಕೆಯನ್ನು ಹಂಚಿಕೊಂಡಿದ್ದರು. ಅಲ್ಲದೆ, ನೂತನ ರಾಜ್ಯಪಾಲರು ಪ್ರಮಾಣ ವಚನ ಸ್ವೀಕರಿಸಿದೊಡನೆಯೇ ಪುಷ್ಪಗುಚ್ಛ ನೀಡಿ ಅಭಿನಂದಿಸಿ ಶುಭ ಹಾರೈಸಿದರು.

ಈ ಮುನ್ನ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ರಾಷ್ಟ್ರಪತಿ ಅವರಿಂದ ಸ್ವೀಕೃತವಾದ ನೇಮಕಾತಿ ಪತ್ರವನ್ನು ವಾಚಿಸಿದರು.

ಉಪ ಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಮತ್ತು ಡಾ ಸಿ ಎನ್ ಅಶ್ವಥನಾರಾಯಣ, ರಾಜ್ಯ ಸಚಿವ ಸಂಪುಟದ ಸದಸ್ಯರಾದ ಕೆ ಎಸ್ ಈಶ್ವರಪ್ಪ, ಆರ್. ಅಶೋಕ್, ಎಸವರಾಜ ಬೊಮ್ಮಾಯಿ, ಎಸ್ ಸುರೇಶ್ ಕುಮಾರ್, ವಿ. ಸೋಮಣ್ಣ, ಎಸ್. ಟಿ. ಸೋಮಶೇಖರ್, ಮುರುಗೇಶ್ ಆರ್ ನಿರಾಣಿ, ಡಾ ಕೆ ಸುಧಾಕರ್, ಸಿ. ಪಿ. ಯೋಗೇಶ್ವರ್ ಮತ್ತು ಆರ್. ಶಂಕರ್, ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆಯ ರಾಜ್ಯ ಸಚಿವ ರಾಮ್‍ದಾಸ್ ಅಠಾವಲೆ, ಲೋಕಸಭಾ ಸದಸಸ್ಯರಾದ ಡಿ. ವಿ. ಸದಾನಂದ ಗೌಡ, ಸುಮಲತಾ ಮತ್ತು ಪಿ ಸಿ ಮೋಹನ್, ರಾಜ್ಯ ಸಭಾಸದಸ್ಯ ಕೆ ಸಿ ರಾಮಮೂರ್ತಿ, ರಾಜ್ಯ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯಸಭೆಯ ಪತ್ರಿಪಕ್ಷ ನಾಯಕ ಎಂ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಲೋಕಾಯುಕ್ತ ಪಿ ವಿಶ್ವನಾಥ ಶೆಟ್ಟಿ, ರಾಜ್ಯ ವಿಧಾನಸಭಾ ಸದಸ್ಯ ಎ. ಎಸ್. ನಡಳ್ಳಿ, ರಾಜ್ಯ ವಿಧಾನ ಪರಿಷತ್ ಸದಸ್ಯ ಕೆ ಗೋವಿಂದ ರಾಜ್, ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತ ಎನ್ ಜಿ ಶ್ರೀನಿವಾಸ್ ರಾಜ್ಯ ಆರಕ್ಷಕ ಮಹಾ ನಿರ್ದೇಶಕ ಮತ್ತು ಮಹಾ ನಿರೀಕ್ಷಕ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಪಿ ಹೇಮಲತಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ ಮಂಜುನಾಥ್ ಅವರೂ ಸೇರಿದಂತೆ ಹಲವು ಗಣ್ಯರು ಈ ಸಮಾರಂಭಕ್ಕೆ ಸಾಕ್ಷಿಯಾಗಿದ್ದರು.

About Author

Leave a Reply

Your email address will not be published. Required fields are marked *