ಆಶಾ ಕಾರ್ಯಕರ್ತೆಯರ ಸೇವೆಗೆ ದೇಶವೇ ಶ್ಲಾಘನೆ: ಸಚಿವ ಎಸ್.ಟಿ.ಸೋಮಶೇಖರ್

1 min read

ಮೈಸೂರು: ಕೋವಿಡ್ ನಂತಹ ಸಂಕಷ್ಟದ ಕಾಲದಲ್ಲಿ ಜೀವದ ಹಂಗನ್ನು ತೊರೆದು ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರ ಸೇವೆಯನ್ನು ದೇಶವೆ ಶ್ಲಾಘಿಸುತ್ತಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಿಳಿಸಿದರು.

ನಂಜನಗೂಡು ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಹೆಗ್ಗಡನಹಳ್ಳಿಯಲ್ಲಿ ಆಶಾ ಕಾರ್ಯಕರ್ತೆಯರನ್ನು ಕುರಿತು ಮಾತನಾಡಿದ ಅವರು, ಕೋವಿಡ್ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಆಶಾ ಕಾರ್ಯಕರ್ತೆಯರು ಮನೆ ಮನೆ ಸರ್ವೆಯನ್ನು ಮಾಡುವಾಗ ಹಲವಾರು ತೊಂದರೆಗಳು ಬರಬಹುದು. ಹೀಗಾಗಿ ಅವರೊಡನೆ ಪೊಲೀಸ್ ಸಿಬ್ಬಂದಿಗಳನ್ನು ಕಳುಹುಸಿಕೊಡಿ ಇದರಿಂದ ಅವರಿಗೆ ಧೈರ್ಯ ಬರುತ್ತದೆ ಎಂದು ಹೇಳಿದರು.

ಆಶಾ ಕಾರ್ಯಕರ್ತೆಯರಿಗೆ ಈಗಾಗಲೇ ವೇತನ ಬಿಡುಗಡೆಯಾಗಿದ್ದು, ವೇತನದಲ್ಲಿ ಯಾವುದೇ ತೊಂದರೆ ಉಂಟಾಗುವುದಿಲ್ಲ ಎಂದರು.

ಕೋವಿಡ್ ಸೋಂಕಿತರನ್ನು ಪತ್ತೆ ಹಚ್ಚುವ ಸಲುವಾಗಿ ನಡೆಯುತ್ತಿರುವ ಮನೆ ಮನೆ ಸರ್ವೆಯು ಇದೆ ತಿಂಗಳಲ್ಲಿ ಬಹುತೇಕ ಮುಕ್ತಯವಾಗುತ್ತದೆ. ಸರ್ವೆಯಲ್ಲಿ ಕೋವಿಡ್ ಲಕ್ಷಣಗಳು ಯಾರಿಗಾದರೂ ಕಂಡುಬಂದರೆ ಅವರಿಗೆ ಕೋವಿಡ್ ಸೆಂಟರ್ ಗೆ ಸೇರಿಸಲಾಗುತ್ತದೆ. ಇದರಿಂದ ಕೋವಿಡ್ ಪ್ರಕರಣಗಳು ಮುಂದಿನ ದಿನಗಳಲ್ಲಿ ಕಡಿಮೆಯಾಗುತ್ತದೆ ಎಂದು ತಿಳಿಸಿದರು.

ಹುಲ್ಲಹಳ್ಳಿಯ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ ಮಾತನಾಡಿದ ಅವರು, ತಾಲ್ಲೂಕುಗಳಲ್ಲಿ ಹಬ್ಬಿರುವ ಕೋವಿಡ್ ಪ್ರಕರಣಗಳನ್ನು ಪತ್ತೆ ಹಚ್ಚುವುದರಿಂದ ಕೋವಿಡ್ ಪ್ರಕರಣಗಳು ಮುಂದಿನ ದಿನಗಳಲ್ಲಿ ಕಡಿಮೆಯಾಗಲಿದೆ. ಇದರಿಂದ ಹಳ್ಳಿಗಳು ಕೋವಿಡ್ ಮುಕ್ತ ಹಳ್ಳಿಗಳಾಗಬೇಕು. ಮನೆ ಮನೆ ಸರ್ವೆಯನ್ನು ನಡೆಸುತ್ತಿರುವುದೇ ಇದೆ ಕಾರಣವಾಗಿಯೇ ಎಂದು ಹೇಳಿದರು.

ಮಹದೇವನಗರ ಕೋವಿಡ್ ಸೆಂಟರ್ ಗೆ ಭೇಟಿ ನೀಡಿ ಸೋಂಕಿತರ ಯೋಗ ಕ್ಷೇಮ ವಿಚಾರಿಸಿದರು. ಶಾಸಕರಾದ ಹರ್ಷವರ್ಧನ್, ಸಂಸದ ಪ್ರತಾಪ್ ಸಿಂಹ, ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಜಿಲ್ಲಾ ಪಂಚಾಯತಿಯ ಸಿಇಒ ಎ.ಎಂ.ಯೋಗೀಶ್ , ಉಪವಿಭಾಗಾಧಿಕಾರಿ ಡಾ.ಎನ್.ಸಿ.ವೆಂಕಟರಾಜು, ಡಿವೈಎಸ್ಪಿ ಗೋವಿಂದ ರಾಜು, ತಹಶಿಲ್ದಾರ್ ಮೋಹನ್ ಕುಮಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *