ಮೈಸೂರಿಗೆ ಕಳಂಕ ತರುವ ಆರೋಪ ಮಾಡಿದವರು ಮೈಸೂರು ಜನರ ಕ್ಷಮೆ ಕೇಳಬೇಕು: ಡಿಸಿ ರೋಹಿಣಿ ಸಿಂಧೂರಿ
1 min readಮೈಸೂರು: ಮಾಜಿ ಕಾರ್ಪೋರೇಟರ್, ಶಾಸಕರ ಟೀಕೆಗಳಿಗೆ ಪ್ರತಿಕ್ರಿಯೆ ಕೇಳಬೇಡಿ. ಇದು ಪ್ರತಿಯೊಂದಕ್ಕೂ ಉತ್ತರ ಕೊಡುತ್ತಾ ಕೂರುವ ಸಮಯವಲ್ಲ ಎಂದು ಮೈಸೂರಿನಲ್ಲಿ ಜೆಡಿಎಸ್ ನಾಯಕರಿಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿರುಗೇಟು ನಿಡಿದ್ದಾರೆ.
ನಾನು ಮೈಸೂರಿಗೆ ಬಂದ ಏಳು ತಿಂಗಳಿಂದಲೂ ಪರ್ಸನಲ್ ಆರೋಪ ಮಾಡ್ತಿದ್ದಾರೆ. ದೇಶ ಸೇವೆಗಾಗಿ ನಾವು ಕೆಲಸಕ್ಕೆ ಸೇರಿದ್ದೇವೆ. ಇಂತಹ ಸಾಂಕ್ರಾಮಿಕ ಸಂದರ್ಭದಲ್ಲಿ ಎಲ್ಲರು ಕೈಜೋಡಿಸಿದಾಗ ಮಾತ್ರ ಜೀವ ರಕ್ಷಣೆ ಸಾಧ್ಯ. ಕಲಬೇಡ, ಕೊಲಬೇಡ ಎಂಬ ಬಸವಣ್ಣನ ವಚನ ಎಲ್ಲರೂ ಮಾರ್ಗಸೂಚಿಯಾಗಿ ಸ್ವೀಕರಿಸಬೇಕು. ನಾಡದೇವತೆ ಚಾಮುಂಡೇಶ್ವರಿ ಸ್ವಲ್ಪ ಕಷ್ಟ ಸಾಧ್ಯವಾದರೂ ಸದ್ಬುದ್ದಿ ಕೊಡಲಿ.
ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಕ್ಲೀನ್‌ಚಿಟ್ ಪಡೆದ ವಿಚಾರ. ನಮ್ಮ ಮೇಲಿನ ಆರೋಪ ಇಡೀ ಮೈಸೂರಿಗೆ ಕಳಂಕ ತಂದಿತ್ತು. ಮೈಸೂರಿಗೆ ಕಳಂಕ ತರುವ ಆರೋಪ ಮಾಡಿದವರು ಮೈಸೂರು ಜನರ ಕ್ಷಮೆ ಕೇಳಬೇಕು ಎಂದು ಡಿಸಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.