ಅಗತ್ಯ ವಸ್ತುಗಳನ್ನು ಖರೀದಿಸಲು ವಾಹನ ಬಳಕೆಗೆ ಷರತ್ತುಗಳೊಂದಿಗೆ ಅನುಮತಿ
1 min readಬೆಂಗಳೂರು: ಇಂದಿನಿಂದ (11/05/2021) ಅಗತ್ಯ ವಸ್ತುಗಳನ್ನು ಖರೀದಿಸಲು ವಾಹನ ಬಳಕೆಗೆ ಷರತ್ತುಗಳೊಂದಿಗೆ ಅನುಮತಿ ನೀಡಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿಜಿಪಿ ಪ್ರವೀಣ್ ಸೂದ್, ತಮ್ಮ ಬಡಾವಣೆಗಳಲ್ಲಿ ವಾಹನ ಬಳಸಿ ಅಗತ್ಯ ವಸ್ತುಗಳನ್ನು ಖರೀದಿ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.
ಆದರೆ ಇದನ್ನು ಜನರು ಅನುಕೂಲಕ್ಕಾಗಿ ಬಳಸಿಕೊಳ್ಳಬೇಕೆ ಹೊರತು ಅನಗತ್ಯ ಓಡಾಟಕ್ಕೆ ಬಳಸಿಕೊಂಡು ದುರುಪಯೋಗಪಡಿಸಿಕೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.