ಕಿಡಿಗೇಡಿಗಳು ಇಟ್ಟ ವಿಷಕ್ಕೆ ಎರಡು ಚಿರತೆ ಬಲಿ
1 min read
ಮೈಸೂರು: ಕಿಡಿಗೇಡಿಗಳು ಇಟ್ಟ ವಿಷಕ್ಕೆ ಎರಡು ಚಿರತೆ ಬಲಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ನಂಜನಗೂಡು ತಾಲೂಕಿನ ಕಡಬೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಶುಂಠಿ ಬೆಳೆ ಮಾಡಿರುವ ಜಮೀನಿನಲ್ಲಿ ಚಿರತೆಗಳ ಶವ ಕಂಡುಬಂದಿವೆ. 5 ವರ್ಷದ ಹೆಣ್ಣು ಚಿರತೆ ಮತ್ತು 1 ವರ್ಷದ ಮರಿ ಚಿರತೆ ವಿಷ ತಿಂದು ಸ್ಥಳದಲ್ಲಿ ಸತ್ತಿವೆ.

ಕಡಬೂರು ಗ್ರಾಮದ ರಾಮನಾಯಕ ಎಂಬುವರ ಶುಂಠಿ ಬೆಳೆ ಜಮೀನು ಮತ್ತು ಬಾಳೆ ತೋಟದಲ್ಲಿ 2 ಚಿರತೆಗಳ ಶವ ಸಿಕ್ಕಿದೆ. ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದು ವಿಷ ತಿಂದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ನಂಜನಗೂಡಿನ ಅರಣ್ಯ ಅಧಿಕಾರಿ ರಕ್ಷಿತ್ ಮತ್ತು ಜನಾರ್ದನ್ ಇತರೆ ಸಿಬ್ಬಂದಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಶ್ವಾನ ದಳದ ಸಿಬ್ಬಂದಿಗಳಿಂದ ಕಿಡಿಗೇಡಿಗಳ ಹೆಜ್ಜೆ ಗುರುತನ್ನು ಅರಣ್ಯ ಇಲಾಖಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ವರ್ಷ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ 3 ಚಿರತೆಗಳು ಸಾವನ್ನಪ್ಪಿದವು. ಈಗ ಮತ್ತೆ ನಂಜನಗೂಡು ತಾಲೂಕಿನ ಕಡೂಬೂರು ಗ್ರಾಮದಲ್ಲಿ 2 ಚಿರತೆಗಳು ವಿಷ ತಿಂದು ಸಾವನ್ನಪ್ಪಿವೆ.