ಉತ್ತರ ಪ್ರದೇಶದಲ್ಲಿ ರೈತರ ಹತ್ಯೆ ಖಂಡಿಸಿ ನಗರದಲ್ಲಿ ರೈತರ ಪ್ರತಿಭಟನೆ

1 min read

ಮೈಸೂರು, ಅ.4-ಉತ್ತರ ಪ್ರದೇಶದಲ್ಲಿ ರೈತರ ಹತ್ಯೆಯನ್ನು ಖಂಡಿಸಿ ನಗರದಲ್ಲಿ ರೈತರು ಪ್ರತಿಭಟನೆ ನಡೆಸಿದರು.
ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಎಪಿಎಂಸಿ ಜಂಕ್ಷನ್ ನಲ್ಲಿ ಜಮಾಯಿಸಿದ ರೈತರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ಪ್ರತಿಭಟನೆ ವೇಳೆ ರೈತರು ಹಾಗೂ ಸಾರ್ವಜನಿಕ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ರೈತರನ್ನು ಬೈಕ್ ಸವಾರ ನಿಂದಿಸಿದ್ದು, ರೈತರನ್ನು ನಿಂದಿಸಿದ ಯುವಕನ ಮೇಲೆ ರೈತರು ಹಲ್ಲೆ ನಡೆಸಿದ್ದಾರೆ.
ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಪ್ರತಿಭಟನಾಕಾರರಿಂದ ಯುವಕನನ್ನು ಬಿಡಿಸಿ ಕಳುಹಿಸಿದ್ದಾರೆ.
ಇದೇ ವೇಳೆ ಪ್ರತಿಭಟನಾ ನಿರತ ರೈತರ ಕಣ್ತಪ್ಪಿಸಿ ಟಿಪ್ಪರ್ ಚಾಲಕ ವಾಹನ ಚಲಾಯಿಸಿಕೊಂಡು ಹೋಗಲು ಮುಂದಾಗಿದ್ದಾರೆ. ಕೂಡಲೇ ರೈತನೊಬ್ಬ ಟಿಪ್ಪರ್ ನ ಮುಂಭಾಗವನ್ನೇರಿ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.


ನೀನು ತಿನ್ನುತ್ತಿರುವುದು ರೈತರು ಬೆಳೆದಿರುವ ಅನ್ನವನ್ನು.
ಹಾಗಾಗಿ ನೀನು ರೈತರ ಪ್ರತಿಭಟನೆಗೆ ಬೆಂಬಲ ನೀಡಬೇಕು ಎಂದು ರೈತ ಹರಿಹಾಯ್ದ ಘಟನೆ ನಡೆದಿದೆ. ಈ ವೇಳೆ ಪ್ರತಿಭಟನಾ ನಿರತ ರೈತನ ಆಕ್ರೋಶಕ್ಕೆ ಮಣಿದ ಟಿಪ್ಪರ್ ಚಾಲಕ ರೈತರ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ.

About Author

Leave a Reply

Your email address will not be published. Required fields are marked *