ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ (98) ನಿಧನ
1 min readನವದೆಹಲಿ: ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಇಂದು ಬೆಳಗ್ಗೆ (ಜುಲೈ 7) ಮುಂಬೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
98 ವರ್ಷದ ದಿಲೀಪ್ ಕುಮಾರ್ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಜೂನ್ 29ರಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ದಿಲೀಪ್ ಕುಮಾರ್ ಮುಂಬೈನ ಹಿಂದೂಜಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
‘ದೇವದಾಸ್’, ‘ನಯಾ ದೌರ್’, ‘ಮೊಘಲ್-ಎ-ಅಜಮ್’, ‘ಗಂಗಾ ಜಮುನಾ’ ಮುಂತಾದ ಚಲನಚಿತ್ರಗಳಲ್ಲಿ ಅಪ್ರತಿಮ ಪಾತ್ರಗಳಿಗೆ ಹೆಸರುವಾಸಿಯಾಗಿದ್ದ ದಿಲೀಪ್ ಕುಮಾರ್ ವೃತ್ತಿಜೀವನದಲ್ಲಿ 65 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ 8 ಬಾರಿ ಪ್ರತಿಷ್ಟಿತ
ಫಿಲ್ಮ್ ಫೇರ್ ಪ್ರಶಸ್ತಿ ಪಡೆದ ಅಪ್ರತಿಮ ಮೇರುನಟ. ಇವರು ಪದ್ಮಭೂಷಣ ಹಾಗೂ ದಾದಾಸಾಹೇಬ್ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.