ಇನ್ನೂ ಎರಡು ವರ್ಷ ಯಡಿಯೂರಪ್ಪ ಅವರೇ ಸಿಎಂ: ಬಿ.ವೈ.ವಿಜಯೇಂದ್ರ

1 min read

ಮೈಸೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ. ಹೈಕಮಾಂಡ್ ಹೀಗಾಗಲೇ ಈ ಬಗ್ಗೆ ಸ್ಪಷ್ಪಪಡಿಸಿದೆ. ಮತ್ತೆ ಪದೇ ಪದೇ ಈ ವಿಚಾರದ ಬಗ್ಗೆ ಚರ್ಚೆ ಬೇಡ. ಯಾರಾದರೂ ದೆಹಲಿಗೆ ಹೋಗಿದ್ದರೆ ಅದು ಅವರ ವೈಯಕ್ತಿಕ ವಿಚಾರ. ದೆಹಲಿಗೆ ಹೋದ ಕೂಡಲೇ ಅದಕ್ಕೆ ರಾಜಕೀಯ ಬಣ್ಣ ಹಚ್ಚುವುದು ಬೇಡ. ಇನ್ನೂ ಎರಡು ವರ್ಷ ಯಡಿಯೂರಪ್ಪ ಅವರೇ ಈ ರಾಜ್ಯದ ಸಿಎಂ ಆಗಿ ಇರುತ್ತಾರೆ. ಈ ಬಗ್ಗೆ ಮತ್ತೆ ಮತ್ತೆ ಗೊಂದಲ ಯಾರಿಗೂ ಬೇಡ ಅಂತ ಮೈಸೂರಿನಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.

ನಾನು ಚುನಾವಣೆಗೆ ನಿಲ್ಲಬೇಕೋ ಬೇಡ್ವೋ. ನಿಲ್ಲುವುದಾದರೆ ಯಾವ ಕ್ಷೇತ್ರದಿಂದ ನಿಲ್ಲಬೇಕು. ಇದು ಎರಡು ವರ್ಷದ ನಂತರ ತೀರ್ಮಾನವಾಗುತ್ತೆ. ಬಿಜೆಪಿ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಮಾಡುತ್ತದೆ. ಅಲ್ಲಿಯವರೆಗೆ ಪಕ್ಷ ಸಂಘಟನೆಗೆ ಇಡೀ ರಾಜ್ಯ ಸುತ್ತುವುದು ನನ್ನ ಕೆಲಸ. ವರುಣಾ ಕ್ಷೇತ್ರದ ಕಾರ್ಯಕರ್ತರ ಜೊತೆ ನಿರಂತರ ಸಂಪರ್ಕದಲ್ಲಿರುದು ನಿಜ. ಎಲ್ಲಾ ಕ್ಷೇತ್ರಗಳಲ್ಲೂ ಸಂಚರಿಸಿ ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ಪಕ್ಷ ವಹಿಸಿರುವ ಜವಾಬ್ದಾರಿಯನ್ನು ನಾನು ನಿಭಾಯಿಸುತ್ತಿದ್ದೇನೆ.

ಕಾಂಗ್ರೆಸ್ ಗೆ ಬಿಜೆಪಿ ಆಡಳಿತ ಟೀಕಿಸುವ ನೈತಿಕತೆಯೆ ಉಳಿದಿಲ್ಲ. ಕರೋನಾ ಸಂಕಷ್ಟ ಕಾಲದಲ್ಲಿ ಜನರ ನೋವಿಗೆ ಸ್ಪಂದಿಸುವುದ ಮರೆತು. ಹಾದಿ ಬೀದಿಯಲ್ಲಿ ನಿಂತು ಸಿಎಂ ಅಭ್ಯರ್ಥಿ ಬಗ್ಗೆ ಮಾತಾಡುತ್ತಿದ್ದಾರೆ. ಕಾಂಗ್ರೆಸ್ ಎಲ್ಲಾ ವಿಚಾರದಲ್ಲೂ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ನವರು ಬಿಜೆಪಿ ಬಗ್ಗೆ ಟೀಕಿಸುವುದು ಹಾಸ್ಯಸ್ಪದ ಅಂತ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

About Author

Leave a Reply

Your email address will not be published. Required fields are marked *