“ವಿಷ್ಣು ದಾದಾ ಹೆಸರಲ್ಲಿ International ಬುಕ್ ಆಫ್ ರೆಕಾರ್ಡ್”

1 min read

ಡಾ.ವಿಷ್ಣುವರ್ಧನ್‌ ಅವರ ಹೆಸರಿನಲ್ಲಿ‌ ಮತ್ತೊಂದು ಏಷ್ಯಾ ಬುಕ್‌ ಮತ್ತು ಇಂಟರ್‌ ನ್ಯಾಷನಲ್‌ ಬುಕ್‌ ಆಫ್‌ ರೆಕಾರ್ಡ್!‌

ಡಾ.ವಿಷ್ಣುವರ್ಧನ್‌ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ೫೦ ವರ್ಷಗಳಾದ ಹಿನ್ನಲೆಯಲ್ಲಿ ಅವರ ೫೦ ಸೇನಾನಿಗಳು ಡಾ.ವಿಷ್ಣು ಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ ಅವರ ನೇತೃತ್ವದಲ್ಲಿ ೨೦೨೨ ರ ಸೆಪ್ಟೆಂಬರ್‌ ೧೮ ರಂದು ಬೆಂಗಳೂರಿನ ಡಾ.ವಿಷ್ಣು ಪುಣ್ಯಭೂಮಿಯಲ್ಲಿ ೫೧ ಬೃಹತ್‌ ಕಟೌಟ್‌ಗಳನ್ನು ಸ್ಥಾಪಿಸಿ “ಕಟೌಟ್‌ ಜಾತ್ರೆ” ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಆ ಕಟೌಟ್‌ಗಳಿಗೆ ಬೃಹತ್‌ ಹಾರಗಳನ್ನು ಸಹ ಹಾಕಿಸಿದ್ದರು. ಇಡೀ ಕಾರ್ಯಕ್ರಮಕ್ಕೆ ಅಂದಾಜು ೪೦ ಲಕ್ಷದಷ್ಟು ಹಣ ಖರ್ಚಾಗಿತ್ತು. ಪೊಲೀಸ್‌ ಇಲಾಖೆಯ ಪ್ರಕಾರ ಎರಡೂವರೆ ಲಕ್ಷ ಕನ್ನಡಿಗರು ಈ ಕಟೌಟ್‌ ಜಾತ್ರೆಯಲ್ಲಿ ಭಾಗವಹಿಸಿದ್ದರು.

ಅಂದೇ ಈ ಕಟೌಟ್‌ ಜಾತ್ರೆಯನ್ನು ಏಷ್ಯಾ ಬುಕ್‌ ಆಫ್‌ ರೆಕಾರ್ಡ್ ಮತ್ತು ಇಂಟರ್‌ ನ್ಯಾಷನಲ್‌ ಬುಕ್‌ ಆಫ್‌ ರೆಕಾರ್ಡ್‌ ನಲ್ಲಿ ದಾಖಲಿಸಲು ಮನವಿಯನ್ನು ಸಲ್ಲಿಸಲಾಗಿತ್ತು. ಆ ಸಂಸ್ಥೆಗಳು ನಮ್ಮ ದಾಖಲೆ ಸಂಬಂಧ ಅನೇಕ ಹಂತದ ಪರೀಕ್ಷೆಗಳನ್ನು ನಡೆಸಿದರಲ್ಲದೆ, ಖುದ್ದಾಗಿ ಸ್ಥಳ ಪರಿಶೀಲನೆಯನ್ನು ಸಹ ಮಾಡಿದ್ದರು. ಇದೀಗ ಆ ಎಲ್ಲಾ ಹಂತದ ಪರೀಕ್ಷೆಗಳೂ ಮುಗಿದಿದ್ದು, ಈ ಕಟೌಟ್ ಜಾತ್ರೆಯು ಏಷ್ಯಾ ಬುಕ್‌ ಆಫ್‌ ರೆಕಾರ್ಡ್‌ ಮತ್ತು ಇಂಟರ್‌ ನ್ಯಾಷನಲ್‌ ಬುಕ್‌ ಆಫ್‌ ರೆಕಾರ್ಡ್‌ ನಲ್ಲಿ ದಾಖಲೆಯಾಗಿ ದಾಖಲೆಯಾಗಿದೆ. ಆ ಎರಡೂ ದಾಖಲೆಗಳ ಸರ್ಟಿಫಿಕೇಟ್‌ ಮತ್ತು ಪದಕಗಳು ಇಂದು ನಮಗೆ ತಲುಪಿದವು.

ತೆರೆಮುಂದೆ ತೆರೆಹಿಂದೆ ನುಡಿದಂತೆ ನಡೆದ ಮೇರುನಟನ ಹೆಸರಲ್ಲಿ ಇಂತಹದ್ದೊಂದು ದಾಖಲೆಯನ್ನು ಅವರಿಲ್ಲದ ಹೊತ್ತಿನಲ್ಲಿ ಸ್ಥಾಪಿಸಲು ಸಾಧ್ಯವಾಗಿದ್ದಕ್ಕೆ ನಿಜಕ್ಕೂ ಹೆಮ್ಮೆಪಡುತ್ತೇವೆ. ಈ ದಾಖಲೆಯು ಡಾ.ವಿಷ್ಣುವರ್ಧನ್‌ ಅವರ ಅಗಲಿಕೆಯ ೧೩ ವರ್ಷಗಳ ನಂತರವೂ ಅವರ ನೆನಪನ್ನು ಹಸಿರಾಗಿಡುವ ಕೆಲಸವನ್ನು ಅವರ ಅಭಿಮಾನಿಗಳು ನಿರಂತರವಾಗಿ ಮಾಡುತ್ತಿರುವುದರ ದ್ಯೋತಕವಾಗಿದೆ. ಈ ಕಟೌಟ್‌ ಜಾತ್ರೆಗೆ ಬೆನ್ನೆಲುಬಾಗಿ ನಿಂತ ೫೦ ಸೇನಾನಿಗಳಿಗೆ, ಯೋಜನೆ ಕಾರ್ಯಸಾಧುಗೊಳಿಸಿದ ಆನಂದ್‌ ರಾಚ್‌, ಕಟೌಟ್‌ ವಿನ್ಯಾಸ ಮಾಡಿದ ರಾಜುವಿಷ್ಣು ಮತ್ತು ಈ ಸಂಸ್ಥೆಗಳ ಜೊತೆ ಸಂವಹನ ನಡೆಸಿ, ಸಾಧ್ಯವಾಗಿಸಿದ ಸಾಹಿತಿ ಜನಾರ್ಧನ್‌ ರಾವ್‌ ಅವರಿಗೆ ಧನ್ಯವಾದಗಳನ್ನು ಅರ್ಪಿಸಲು ಇಚ್ಚಿಸುತ್ತೇನೆ.

About Author

Leave a Reply

Your email address will not be published. Required fields are marked *