ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ವತಿಯಿಂದ ಗುಲಾಬಿ ನೀಡಿ ಮತದಾನದ ಜಾಗೃತಿ

1 min read

ಮೈಸೂರು: ನಗರದ ಸಿಟಿ ಬಸ್ ಸ್ಟ್ಯಾಂಡ್ ಆವರಣದಲ್ಲಿ ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿ ಹಾಗೂ ಮತದಾನದ ಕರೆಯೋಲೆ ನೀಡಿ ನಾಳೆ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಸದಸ್ಯರು ಮನವಿ ಮಾಡಿದರು.

ನಂತರ ಮಾತನಾಡಿದ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಅಧ್ಯಕ್ಷರಾದ ಸಿ ಎಸ್ ಚಂದ್ರಶೇಖರ್ ಮಾತನಾಡಿ, ಆಮಿಷಕ್ಕೆ ಮತ ಮಾರಿಕೊಳ್ಳುವುದರಿಂದ ಪ್ರಜಾಪ್ರಭುತ್ವ ಅಪಾಯಕ್ಕೆ ಸಿಲುಕುತ್ತದೆ. ಹಾಗಾಗಿ ಮತದಾರರು ಜಾಗೃತರಾಗುವ ಮೂಲಕ ಅರ್ಹ ಅಭ್ಯರ್ಥಿಗೆ ಮತ ನೀಡಬೇಕು ಎಂದು ತಿಳಿಸಿದರು.

18 ವರ್ಷ ತುಂಬಿದ ಪ್ರತಿಯೊಬ್ಬರೂ ಮತ ಚಲಾಯಿಸಬೇಕು. ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾಗಬೇಕು. ಪ್ರಜಾಪ್ರಭುತ್ವವನ್ನು ರಕ್ಷಿಸಲು ಮತದಾನದಿಂದ ಮಾತ್ರ ಸಾಧ್ಯವಾಗಿದೆ. ಪಾರದರ್ಶಕತೆ ಮತ್ತು ಮುಕ್ತತೆಯಿಂದ ಮತದಾನದಲ್ಲಿ ಭಾಗಿಯಾಗಬೇಕು ಎಂದರು.

ನಂತರ ಮಾತನಾಡಿದ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಸಂಘಟನಾ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್ ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶದಲ್ಲಿ ಮತದಾನದ ಪ್ರಮಾಣ ಕಡಿಮೆಯಾಗುತ್ತಿದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಾಗೃತಿ ಜಾಥಾ ನಡೆಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಅಧ್ಯಕ್ಷರಾದ ಸಿ ಎಸ್ ಚಂದ್ರಶೇಖರ್, ಸಂಘಟನಾ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಎಸ್ ಎನ್ ರಾಜೇಶ್, ಚಿನ್ನ ಬೆಳ್ಳಿ ಅಭಿವೃದ್ಧಿ ಸಂಘದ ಜಿಲ್ಲಾ ಅಧ್ಯಕ್ಷರು ಸುರೇಶ್ ಗೋಲ್ಡ್ ಚಂದನ್, ಸುರೇಶ್, ಶ್ರೀಕಾಂತ್ ಕಶ್ಯಪ್, ಅನಿಲ್ ಕುಮಾರ್, ಬೈರತಿ ಲಿಂಗರಾಜು, ಹಾಗೂ ಇನ್ನಿತರರು ಹಾಜರಿದ್ದರು.

About Author

Leave a Reply

Your email address will not be published. Required fields are marked *