ಕೇರಳದಲ್ಲಿ ಝೀಕಾ ವೈರಸ್ ಪತ್ತೆ ಹಿನ್ನೆಲೆ: ಕರ್ನಾಟಕಕ್ಕೀಗ ಆತಂಕ;- ಗಡಿಯಲ್ಲಿ ಕಟ್ಟೆಚ್ಚರ
1 min read
ಮೈಸೂರು: ಕೇರಳದಲ್ಲಿ ಝೀಕಾ ವೈರಸ್ ಪತ್ತೆ ಹಿನ್ನೆಲೆ ಕರ್ನಾಟಕಕ್ಕೀಗ ಆತಂಕ ಎದುರಾಗಿದೆ. ಹೀಗಾಗಿ ಕೇರಳಾದಿಂದ ಬರುವವರ ಮೇಲೆ ತೀವ್ರ ನಿಗಾ ಇಡಲಾಗಿದೆ.
ಕರ್ನಾಟಕ ಹಾಗೂ ಕೇರಳ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಎಚ್ ಡಿ ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ ನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರತಿವಾಹನ ಸವಾರರ ತಪಾಸಣೆ ನಡೆಸಲಾಗುತ್ತಿದೆ.

ಇನ್ನು ಗಡಿ ಚೆಕ್ ಪೋಸ್ಟ್ ಗೆ ತಾಲೂಕು ಆರೋಗ್ಯಾಧಿಕಾರಿ ರವಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಹೊರ ರಾಜ್ಯದಿಂದ ಬರುವ ವಾಹನಗಳನ್ನು ಕಡ್ಡಾಯ ತಪಾಸಣೆ ಮಾಡಿ RTPCR ನೆಗೆಟಿವ್ ವರದಿ ಪರಿಶೀಲನೆ ಮಾಡಲಾಗುತ್ತಿದೆ. ಸಂಪೂರ್ಣ 2 Doses ಲಸಿಕೆ ಪಡೆದವರಿಗೆ ಹಾಗೂ ಎರಡು ವರ್ಷ ಒಳಪಟ್ಟ ಮಕ್ಕಳಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ.